ಕೋಣಿ: ಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

ಕುಂದಾಪುರ ತಾಲೂಕಿನ ಕೋಣಿಯ ಕೆಳಾಕೇರಿಯ ಹೊಳೆಯಲ್ಲಿ ಸ್ಥಳೀಯ ಯುವಕರೊಂದಿಗೆ ಈಜಲು ತೆರಳಿದ್ದ ಮೂಡ್ಲುಕಟ್ಟೆಯ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ತೀರ್ಥಹಳ್ಳಿ ಮೂಲದ ಪ್ರಥಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ತಿಲಕ್ (18) ಮೃತಪಟ್ಟ ವಿದ್ಯಾರ್ಥಿ. ಇವರು ಖಾಸಗಿ ಪಿಜಿಯಲ್ಲಿದ್ದು, ಅಲ್ಲಿನ ಪರಿಚಿತ ಯುವಕರೊಂದಿಗೆ ಈಜಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw