ರಕ್ಷಿತ್ ಶಿವರಾಮ್, ಅರುಣ್ ಪುತ್ತಿಲ, ಎಸ್ ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸಾವಿರಾರು ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಇಂದು ನಾಮಪತ್ರ ಸಲ್ಲಿಸಿದ್ರು. ಕಾರ್ಯಕರ್ತರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಧಿಕಾರಿ ಯೋಗೇಶ್ ಹೆಚ್.ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಶಾಸಕ ವಸಂತ ಬಂಗೇರ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ವಕೀಲ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಕೆ:
ಇನ್ನು ಪುತ್ತೂರಿನಲ್ಲಿ ಬಂಡಾಯ ಅಭ್ಯರ್ಥಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು. ಮೆರವಣಿಗೆಯ ಮೊದಲು ಅರುಣ್ ಪುತ್ತಿಲ ಅವರು ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಎಸ್ ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ:
ಇನ್ನು ಬಂಟ್ವಾಳದಲ್ಲಿ ಎಸ್ ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಹಾಗೂ ಉಳ್ಳಾಲ ಎಸ್ ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಹಾಗೂ ಮೂಡಬಿದ್ರೆಯಲ್ಲಿ ಎಸ್ ಡಿಪಿಐ ಅಭ್ಯರ್ಥಿ ಅಲ್ಫೊನ್ಸೋ ಫ್ರಾಂಕೋ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw