ಬಿಜೆಪಿಯಲ್ಲಿ ಅನೇಕರಿಗೆ ಟಿಕೆಟ್ ಕೈ ತಪ್ಪಲು ಬಿ.ಎಲ್ ಸಂತೋಷ್ ಕಾರಣ : ಸಿದ್ದರಾಮಯ್ಯ ಆರೋಪ

ಮೈಸೂರು : ಸಂಪೂರ್ಣ ಬಿಜೆಪಿ ಬಿ.ಎಲ್ ಸಂತೋಷ್ ಕಪಿಮುಷ್ಠಿಯಲ್ಲಿ ಸಿಲುಕಿಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯಲ್ಲಿ ಅನೇಕರಿಗೆ ಟಿಕೆಟ್ ಕೈ ತಪ್ಪಲು ಬಿ.ಎಲ್ ಸಂತೋಷರೇ ಕಾರಣ ಎಂದು ಆರೋಪಿಸಿದ್ದಾರೆ.
ಯಾವುದೇ ಗುರುತರ ಆರೋಪಗಳಿಲ್ಲದಿದ್ದರೂ ಸಹ ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ, ರಾಮದಾಸ್ ಸೇರಿದಂತೆ ಅನೇಕ ಬಿಜೆಪಿ ನಾಯಕರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಇವರೆಲ್ಲರಿಗೆ ಟಿಕೆಟ್ ಕೈ ತಪ್ಪಲು ಬಿ,ಎಲ್ ಸಂತೋಷ್ ಕಾರಣ ಎಂದು ಹೇಳಿದರು.
ಈಗಾಗಲೇ ಹಲವಾರು ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ಧಾರೆ.ಶಾಸಕ ರಾಮದಾಸ್ ಸೇರಿದಂತೆ ಬೇರೆ ಯಾರೇ ಆದರೂ ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw