ಯಾವ್ ಜೋಶಿ? ಯಾವ್ ಬಿ.ಎಲ್. ಸಂತೋಷ? ಈ ಬಾರಿಯೂ ಲಿಂಗಾಯತರೇ ಸಿಎಂ ಆಗ್ತಾರೆ: ಯತ್ನಾಳ್

ರಾಜ್ಯ ಚುನಾವಣಾ ಸಂದರ್ಭದಲ್ಲಿ ಸಿಎಂ ರೇಸ್ ನಲ್ಲಿದ್ದ ಬಿಜೆಪಿಯ ಕೆಲವು ಲಿಂಗಾಯತ ನಾಯಕರು ಬಿಜೆಪಿ ತೊರೆಯುತ್ತಿರುವುದಕ್ಕೆ ಪಕ್ಷದಲ್ಲಿನ ಬ್ರಾಹ್ಮಣ ನಾಯಕರೇ ಕಾರಣ ಎನ್ನುವ ಆರೋಪಗಳು ಕೇಳಿಬಂದಿವೆ. ಇದ್ದಕ್ಕೆ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿ ಆಗುವುದು ಎಂದು ಹೇಳಿದ್ದಾರೆ.
ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ”ಯಾವ್ ಜೋಶಿ? ಯಾವ್ ಬಿ.ಎಲ್. ಸಂತೋಷ? ಅವರು ಮುಖ್ಯಮಂತ್ರಿ ಆಗುವುದಿಲ್ಲ. ಈ ಬಾರಿ ಲಿಂಗಾಯತರೇ ಮುಖ್ಯಮಂತ್ರಿ ಆಗುವುದು” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ
ನಾನು ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿ ಇಲ್ಲ. ಲಿಂಗಾಯತರು ಯಾರದರೂ ಬರಬಹುದು. ಅರವಿಂದ ಬೆಲ್ಲದ್ ಬಗ್ಗೆ ನನಗೆ ಗೊತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿಯೊಳಗೆ ಲಿಂಗಾಯತರು ಮಾತ್ರವೇ ಮುಖ್ಯಮಂತ್ರಿ ಆಗುತ್ತಾರೆ” ಎಂದರು.
ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ:
“ಕೆಲವರು ಭಾರತೀಯ ಜನತಾ ಪಾರ್ಟಿಯನ್ನು ಬಿಟ್ಟು ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಯಾವುದು ದೇಶ ವಿರೋಧಿ 2047ರಲ್ಲಿ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಉದ್ದೇಶವಿರುವ ಎಸ್ಡಿಪಿಐ ಹಾಗೂ ಪಿಎಫ್ಐ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್ ಜೊತೆ ಹೋಗಿರುವವರು ಬಿಜೆಪಿಯಲ್ಲಿ ಎಲ್ಲ ಅಧಿಕಾರವನ್ನು ಅನುಭವಿಸಿದ್ದಾರೆ” ಎಂದು ಹೆಸರು ಹೇಳದೇ ಶೆಟ್ಟರ್ ವಿರುದ್ಧ ಯತ್ನಾಳ್ ವಾಗ್ಧಾಳಿ ನಡೆಸಿದರು.
”ಬಿಜೆಪಿಯಲ್ಲಿ ಎಲ್ಲ ಸುಖವನ್ನು ಅನುಭವಿಸಿದ ಶೆಟ್ಟರ್ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಹೋದರೆ ಪಕ್ಷಕ್ಕೆ ನಷ್ಟವಿಲ್ಲ. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ನಾಯಕರಿದ್ದಾರೆ. ಲಿಂಗಾಯತ ಹೆಸರು ಹೇಳಿಕೊಂಡು ಶೆಟ್ಟರ್ ಶಾಸಕ, ಮಂತ್ರಿ, ಉಪ ಮುಖ್ಯಮಂತ್ರಿ, ಸ್ಪೀಕರ್ ಆಗಿ ಸುಖ ಉಂಡಿದ್ದಾರೆ” ಎಂದು ಟೀಕಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw