ಮನೆಯ ಹೊರಗೆ ಮಲಗಿದ್ದ ಮಹಿಳೆಯನ್ನು ಹೊತ್ತೊಯ್ದ ಚಿರತೆ!

ಮನೆಯ ಹೊರಗೆ ಮಲಗಿದ್ದ ಮಹಿಳೆಯನ್ನು ಚಿರತೆ ಹೊತ್ತೊಯ್ದು ಕೊಂದು ಹಾಕಿದ ಘಟನೆ ಮಹಾರಾಷ್ಟದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತ ಮಹಿಳೆಯು ರಾತ್ರಿ ಮನೆಯ ಹೊರಗೆ ಮಲಗಿದ್ದಾಗ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಮೃತಮಹಿಳೆಯನ್ನು ಮಂದಾಭಾಯಿ ಸಿಂಗ್ ಎಂದು ಗುರುತಿಸಲಾಗಿದೆ.
ಚಿರತೆಯು ಮಹಿಳೆಯ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಮಹಿಳೆ ಕೂಗಿಕೊಂಡಿದ್ದು,ಚಿರತೆಯು ಕಾಡಿಗೆ ಪರಾರಿಯಾಗಿತ್ತು.ಆದರೇ ಮಹಿಳೆ ಮಾತ್ರ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚಿರತೆಯನ್ನು ಸೆರೆ ಹಿಡಿಯಲು 10 ಅರಣ್ಯ ಸಿಬ್ಬಂದಿಗಳ ತಂಡ ಗ್ರಾಮದಲ್ಲಿ ಗಸ್ತು ತಿರುಗುತ್ತಿದ್ದು, ಆಸುಪಾಸಿನಲ್ಲಿ ಎರಡು ಬೋನುಗಳನ್ನು ಅಳವಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw