ಮತದಾನ ಜಾಗೃತಿಗಾಗಿ ಚಾಮರಾಜನಗರ ಡಿಸಿ ನೇತೃತ್ವದಲ್ಲಿ ಬೈಕ್ ರ್ಯಾಲಿ - Mahanayaka

ಮತದಾನ ಜಾಗೃತಿಗಾಗಿ ಚಾಮರಾಜನಗರ ಡಿಸಿ ನೇತೃತ್ವದಲ್ಲಿ ಬೈಕ್ ರ್ಯಾಲಿ

chamaraja nagar
26/04/2023


Provided by

ಚಾಮರಾಜನಗರ: ಮತದಾನ ಜಾಗೃರಿಗಾಗಿ ಇಂದು ಚಾಮರಾಜನಗರ ಜಿಲ್ಲಾ‌ ಸರ್ಕಾರಿ ನೌಕರರು 3 ಕಿಮೀ ಬೈಕ್ ರ್ಯಾಲಿ ನಡೆಸಿ ಗಮನ ಸೆಳೆದಿದ್ದಾರೆ. ಚಾಮರಾಜನಗರ ಡಿಸಿ ರಮೇಶ್ ರಾಯಲ್ ಎನ್ ಫೀಲ್ಡ್ ಬೈಕ್ ಏರಿ ರ್ಯಾಲಿಯ ನೇತೃತ್ವದ ವಹಿಸಿಕೊಂಡು ಬೈಕ್ ಚಲಾಯಿಸಿದ್ದಾರೆ.

ಚಾಮರಾಜನಗರ ಎಡಿಸಿ, ಜಿಪಂ ಸಿಇಒ, ತಹಶಿಲ್ದಾರ್ ಸೇರಿದಂತೆ ಎಲ್ಲಾ ಜಿಲ್ಲಾ‌ಮಟ್ಟದ ಅಧಿಕಾರಿಗಳು, ನೌಕರರು ಸೇರಿದಂತೆ ನೂರಾರು ಮಂದಿ ಬೈಕ್ ಚಲಾಯಿಸಿ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು.

ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದ್ದು ಯಾವುದೇ ಕಾರಣಕ್ಕೂ ಅದನ್ನು ವ್ಯರ್ಥ ಮಾಡಿಕೊಳ್ಳದೇ ಹಕ್ಕು ಚಲಾಯಿಸಿಬೇಕು, ಮತದಾನದಿಂದ ದೂರ ಉಳಿಯಬಾರದು ಎಂದು ಜನರಲ್ಲಿ ಡಿಸಿ ಮನವಿ ಮಾಡಿಕೊಂಡರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ