ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ | ಸಂತಸ ಹಂಚಿಕೊಂಡ ವಿರಾಟ್ ಕೊಹ್ಲಿ - Mahanayaka
12:53 PM Saturday 18 - October 2025

ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ | ಸಂತಸ ಹಂಚಿಕೊಂಡ ವಿರಾಟ್ ಕೊಹ್ಲಿ

11/01/2021

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ವಿರಾಟ್ ಕೊಹ್ಲಿ ಅವರೇ ಹಂಚಿಕೊಂಡಿದ್ದಾರೆ.


Provided by

ಇಂದು ಮಧ್ಯಾಹ್ನ ಮಗು ಜನಿಸಿರುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದು,  ನಿಮ್ಮ ಪ್ರೀತಿ, ಪ್ರಾರ್ಥನೆ ಹಾಗೂ ಶುಭಾಶಯಗಳಿಗೆ ನಾವು ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಅನುಷ್ಕಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು, ಜೀವನದಲ್ಲಿ ಈ ಸೌಭಾಗ್ಯವನ್ನು ಅನುಭವಿಸಲು ಸಾಧ್ಯವಾಗಿರುವುದಕ್ಕೆ ನಾವು ಅದೃಷ್ಟವಂತರು. ಈ ಸಂದರ್ಭದಲ್ಲಿ ನಮ್ಮ ಖಾಸಗಿತನಕ್ಕೆ ನೀವೆಲ್ಲರು ಗೌರವಿಸುವುದಾಗಿ ಭಾವಿಸುತ್ತೇನೆ. ಪ್ರೀತಿಯಿಂದ ವಿರಾಟ್ ಎಂದು ಅವರು ಉಲ್ಲೇಖಿಸಿದ್ದಾರೆ.

ಇತ್ತೀಚಿನ ಸುದ್ದಿ