ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿ ಪರ ತೇಜಸ್ವಿ ಸೂರ್ಯ ಮತಯಾಚನೆ - Mahanayaka

ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿ ಪರ ತೇಜಸ್ವಿ ಸೂರ್ಯ ಮತಯಾಚನೆ

umesh shety
28/04/2023


Provided by

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿರವರ ಪರ ಲೋಕಸಭಾ ಸದಸ್ಯರಾದ ತೇಜಸ್ವಿಸೂರ್ಯರವರು ಕಾವೇರಿಪುರ ವಾರ್ಡ್ ನಲ್ಲಿ ಮತಯಾಚನೆ ಮಾಡಿದರು.

ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿರವರು, ರಾಜ್ಯ ಬಿಜೆಪಿ ಯುವ ಮುಖಂಡರಾದ ಡಾ.ಅರುಣ್ ಸೋಮಣ್ಣರವರು, ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡರು, ಮಾಜಿ ಮಹಾನಗರ ಪಾಲಿಕೆ ಸದಸ್ಯ ಮೋಹನ್ ಕುಮಾರ್ ರವರು ಭಾಗವಹಿಸಿದ್ದರು.

ತೇಜಸ್ವಿಸೂರ್ಯರವರು ಪಾದಯಾತ್ರೆ ಮೂಲಕ ಮತಯಾಚನೆ ಮಾಡಿ ಬೀದಿ ಬದಿಯ ಸಣ್ಣ ಹೋಟೆಲ್ ನಲ್ಲಿ ಕಾರ್ಯಕರ್ತರ ಜೊತಯಲ್ಲಿ ಬೊಂಡ ಸವಿದು, ಟೀ ಸೇವನೆ ಮಾಡಿದ , ಆನ್ ಲೈನ್ ಡಿಜಿಟಲ್ ಪೇಮೆಂಟ್ ಮಾಡಿದರು, ಡಿಜಿಟಲ್ ಪೇಮೆಂಟ್ ಮಹತ್ವ ತಿಳಿಸಿದರು.

ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರಮೋದಿ ರವರ ಪಾರದರ್ಶಕ ಆಡಳಿತ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಸತಿ ಸಚಿವ ವಿ.ಸೋಮಣ್ಣರವರು ಮಾಡಿರುವ ಅಭಿವೃದ್ದಿ ಸಾಧನೆಗಳನ್ನು ಮತದಾರರಿಗೆ ತಿಳಿಸಲಾಯಿತು.

ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ರಾಮಪ್ಪ, ಪಲ್ಲವಿ ಚನ್ನಪ್ಪ ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ