ಮೆಟ್ರೋದಲ್ಲಿ ಪ್ರಯಾಣಿಕರ ಎದುರೇ ಹಸ್ತಮೈಥುನ: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಖಂಡನೆ
ದೆಹಲಿ: ಮೆಟ್ರೋದಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಕರ ಎದುರೇ ಹಸ್ತಮೈಥುನ ಮಾಡಿದ ವಿಲಕ್ಷಣ ಘಟನೆ ನಡೆದಿದ್ದು, ಈ ಘಟನೆಯನ್ನು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ತೀವ್ರವಾಗಿ ಖಂಡಿಸಿದ್ದಾರೆ.
ಘಟನೆ ಸಂಬಂಧ ಶುಕ್ರವಾರ ನಗರ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಘಟನೆಯನ್ನು ಸ್ವಾತಿ ಮಲಿವಾಲ್ ಅವರು ಇದೊಂದು ಅನಾರೋಗ್ಯಕರ ಬೆಳವಣಿಗೆಯಾಗಿದ್ದು, ಇದರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ವ್ಯಕ್ತಿಯು ಪ್ರಯಾಣಿಕರ ನಡುವೆಯೇ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ವೇಳೆ ಸಾಕಷ್ಟು ಮಹಿಳಾ ಪ್ರಯಾಣಿಕರು ಇದ್ದರು. ಇದೊಂದು ಅಸಹ್ಯಕರ ಮತ್ತು ಅನಾರೋಗ್ಯಕರ ಬೆಳವಣಿಗೆಯಾಗಿದೆ. ಪೊಲೀಸರು ಮತ್ತು ದೆಹಲಿ ಮೆಟ್ರೋ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























