ಚಾಮರಾಜನಗರದಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಮಳೆ ಅಡ್ಡಿ ಭೀತಿ

ಚಾಮರಾಜನಗರ: ರಾಜ್ಯದ ವಿವಿಧೆಡೆಗಳಲ್ಲಿ ಮಳೆಯಾಗುತ್ತಿದ್ದು, ಇದೇ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಮಳೆ ಅಡ್ಡಿ ಭೀತಿ ಸೃಷ್ಟಿಯಾಗಿದೆ.
ಚಾಮರಾಜನಗರದಲ್ಲಿ ಇಂದು 3:30 ಕ್ಕೆ ನಡೆಯುವ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಆದರೆ ಈ ನಡುವೆ ಕಳೆದ 20 ನಿಮಿಷದಿಂದ ಚಾಮರಾಜನಗರದಲ್ಲಿ ಜೋರು ಮಳೆ ಸುರಿಯುತ್ತಿದೆ.
ವಿಶೇಷ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಆಗಮನಕ್ಕೆ ಮಳೆಯಿಂದಾಯಿ ಅಡ್ಡಿಯುಂಟಾಗಿದೆ.
ಜೋರು ಮಳೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ನಲ್ಲಿ ಆಗಮಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸಮಾವೇಶಕ್ಕೆ ವರುಣನ ಅಡ್ಡಿಯಿಂದಾಗಿ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw