ಈಗಿನ ಪಕ್ಷ ಜನರಿಗೆ ಮೋಸ ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

“ ಮೀನುಗಾರರು ಕಷ್ಟದಿಂದ ಜೀವನ ಸಾಗಿಸುತ್ತಿದ್ದಾರೆ. ಬಂದರಿನಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ. ಬಂದರಿನಲ್ಲಿ ಡ್ರಜ್ಜಿಂಗ್ ಆಗದೆ ಐದಾರು ವರ್ಷಗಳಾಗಿವೆ. ಈಗಿನ ಪಕ್ಷ ಜನರಿಗೆ ಮೋಸ ಮಾಡಿದೆ.” ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಹೇಳಿದ್ದಾರೆ.
ಅವರು ಇಂದು ಮತಯಾಚನೆಗಾಗಿ ಮೀನುಗಾರರೊಂದಿಗೆ ನಡೆದ ಸಂದರ್ಭ ಮಾತನಾಡಿದ್ದಾರೆ.ಲೋಕಸಭಾ ಸದಸ್ಯ ಮತ್ತು ಉಡುಪಿ – ಚಿಕ್ಕಮಗಳೂರು ಕ್ಷೇತ್ರಗಳ ಉಸ್ತುವಾರಿಗಳಾದ ಶ್ರೀಯುತ ಪ್ರತಾಪನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ ಎ. ಗಪೂರ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಮಲ್ಪೆಯ ನಾಗರಿಕರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw