ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದ್ರು ಅಂತ ಗೊತ್ತಿಲ್ಲ: ಸೋಮಣ್ಣ ಬೇಸರ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ

ಮೈಸೂರು: ವರುಣ ಕ್ಷೇತ್ರದ ಅಭಿವೃದ್ಧಿ ನನ್ನಿಂದ ಮಾತ್ರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿ.ಸೋಮಣ್ಣ, ತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕು ಎಂಬಂತೆ ಅವರು ಹೇಳಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯ ಮನಸ್ಸು ಮಾಡಿದರೆ ವರುಣಾ ಅಭಿವೃದ್ಧಿ ಮಾಡಬಹುದಿತ್ತು. ಆದರೆ ಈ ಕ್ಷೇತ್ರದಲ್ಲಿ ಒಂದು ಕಾಲೇಜು ಇಲ್ಲ, ಆಸ್ಪತ್ರೆ ಇಲ್ಲ, ಸರಿಯಾದ ರಸ್ತೆಗಳಿಲ್ಲ. ಬಾದಾಮಿ ಕ್ಷೇತ್ರದಲ್ಲೂ ಸಿದ್ದರಾಮಯ್ಯ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಜನರ ಋಣ ತೀರಿಸುವುದಕ್ಕೂ ಬದ್ಧತೆ ಬೇಕೆಂದು ಟಾಂಗ್ ನೀಡಿದರು.
ಜನರ ಋಣ ತೀರಿಸುವ ಕೆಲಸವನ್ನು ನಾನು ಮಾಡಿದ್ದೇನೆ. ಎಲ್ಲದ್ದಕ್ಕೂ ನಾನೇ ಎಂಬುವುದನ್ನು ಸಿದ್ದರಾಮಯ್ಯ ಮೊದಲು ಬಿಡಲಿ. ವರುಣ ಕ್ಷೇತ್ರದ ಜನರು ಗೆಲ್ಲಿಸಿದರೆ ನಾನು ವರುಣದಲ್ಲೇ ಇರುತ್ತೇನೆ. ವರುಣ ಕ್ಷೇತ್ರದಲ್ಲೇ ಶಾಶ್ವತವಾಗಿ ಮನೆ ಮಾಡುತ್ತೇನೆ ಎಂದರು.
ಸ್ಟಾರ್ ಪ್ರಚಾರಕ್ಕೆ ಸೋಮಣ್ಣ ಟಾಂಗ್:
ಸಿದ್ದರಾಮಯ್ಯ ಪರ ಸ್ಟಾರ್ ಗಳ ಪ್ರಚಾರ ವಿಚಾರವಾಗಿ ಟಾಂಗ್ ಕೊಟ್ಟ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ, ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ಗಳನ್ನು ಕರೆಸಿಕೊಂಡು ಪ್ರಚಾರಕ್ಕೆ ಇಳಿದಿದ್ದಾರೆ. ಒಂದೇ ದಿನ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ಸಿದ್ದರಾಮಯ್ಯ ಈಗ ಮತ್ತೆ ಮತ್ತೆ ಬರುತ್ತಿದ್ದಾರೆ ಎಂದರು.
ರಾಜಕುಮಾರ್ ಕುಟುಂಬಕ್ಕೂ ನನಗೂ 40 ವರ್ಷದ ಅವಿನಾಭಾವ ಸಂಬಂಧವಿದೆ. ಪುನೀತ್ ರಾಜಕುಮಾರ್ ಹೆಸರಿನಲ್ಲಿ ನಮ್ಮ ಕ್ಷೇತ್ರದಲ್ಲಿ ಬೃಹತ್ ಆಸ್ಪತ್ರೆ ಕಟ್ಟಿಸಿದ್ದೇನೆ. ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದರು ನನಗೆ ಗೊತ್ತಿಲ್ಲ. ನನಗೆ ವಿಜಯ್, ರಮ್ಯಾ ಬಗ್ಗೆ ಗೊತ್ತಿಲ್ಲ ಆದರೆ ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದರು ಗೊತ್ತಿಲ್ಲ ಅಷ್ಟೆ. ಸಿದ್ದರಾಮಯ್ಯ ಅವರು ಸ್ಟಾರ್ ಪ್ರಚಾರಕರ ಜೊತೆ ಬಂದು ಸೋಮಣ್ಣ ವಿರುದ್ದ ಪ್ರಚಾರ ಮಾಡುತ್ತಿದ್ದಾರಲ್ಲ ನನಗೆ ಅದೇ ಖುಷಿ. ಜನ ಸೇರಿಸಲು ಸಿದ್ದರಾಮಯ್ಯ ಸ್ಟಾರ್ ಗಳ ಜೊತೆ ಬರುತ್ತಿದ್ದಾರೆ ಅಷ್ಟೇ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw