ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು ಇವರೇ ನೋಡಿ - Mahanayaka
10:14 AM Saturday 23 - August 2025

ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು ಇವರೇ ನೋಡಿ

13/01/2021


Provided by

ಬೆಂಗಳೂರು: ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, 7 ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರ ಪೈಕಿ ಸುಳ್ಯ ಶಾಸಕ ಅಂಗಾರ ಅವರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 6 ಬಾರಿಗೆ ಗೆದ್ದಿದ್ದ ಅಂಗಾರ ಅವರಿಗೆ ಈವರೆಗೆ ಯಾವುದೇ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಉಳಿದಂತೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಮಹದೇವಪುರ ಶಾಸಕ ಅವರವಿಂದ ಲಿಂಬಾವಳಿ, ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್,  ಬೀಳಗಿ ಶಾಸಕ ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯ ಆರ್.ಶಂಕರ್, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ನೂತನ ಸಚಿವರಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ