ತಮ್ಮ ಮತವನ್ನು ಬೇರೆಯವರಿಗೆ ಹಾಕಿದ ಅಭ್ಯರ್ಥಿಗಳು ಇವರು…!
ಚಾಮರಾಜನಗರ: ಇಂದು ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ಮತಗಟ್ಟೆಗೆ ಆಗಮಿಸಿ ಬಿರುಸಿನ ಮತದಾನ ನಡೆಸುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ತಮ್ಮ ಮತವನ್ನು ಬೇರೆಯವರಿಗೆ ಹಾಕಿದ್ದಾರೆ. ಸ್ಪರ್ಧಿಸುವ ಕ್ಷೇತ್ರ ಬೇರೆ– ವಿಳಾಸ, ಹುಟ್ಟೂರು ಬೇರೆಯಾಗಿರುವ ಹಿನ್ನೆಲೆಯಲ್ಲಿ ತಮ್ಮ ಓಟು ಬೇರೆಯವರಿಗೆ ಅಭ್ಯರ್ಥಿಗಳು ಹಾಕಿದ್ದಾರೆ.
ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಸ್ಪರ್ಧಾಳು ದರ್ಶನ್ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಮಾಡಿದ್ದಾರೆ. ಚಾಮರಾಜನಗರ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವೋಟ್ ಮಾಡಿದ್ದಾರೆ.
ಕೊಳ್ಳೇಗಾಲದಲ್ಲಿ ತೀವ್ರ ಪೈಪೋಟಿ ಕೊಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಚಾಮರಾಜನಗರ ಕ್ಷೇತ್ರ ಆಲೂರು ಗ್ರಾಮದಲ್ಲಿ ಮತ ಚಲಾವಣೆ ಮಾಡಿದ್ದಾರೆ. ಕೊಳ್ಳೇಗಾಲದ ಜೆಡಿಎಸ್ ಅಭ್ಯರ್ಥಿ ಬಿ.ಪುಟ್ಟಸ್ವಾಮಿ ವರುಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಮಾಡಿದ್ದಾರೆ.
ಕನ್ನಡ ಚಳವಳಿಗಾರ, ಚಾಮರಾಜನಗರ ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ ಬೆಂಗಳೂರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಹನೂರು ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಬೆಂಗಳೂರಲ್ಲಿ ವೋಟಿಂಗ್ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























