ಕೆಎಸ್ಸಾರ್ಟಿಸಿ ಬಸ್ ಚಾಲಕನನ್ನು ಬಸ್ ನಿಲ್ದಾಣದಲ್ಲೇ ಅಟ್ಟಾಡಿಸಿ ಕೊಚ್ಚಿ ಕೊಂದ ದುಷ್ಕರ್ಮಿಗಳು: ಬೆಚ್ಚಿ ಬಿದ್ದ ಜನ
ಕಲಬುರಗಿ: ಕೆಎಸ್ಸಾರ್ಟಿಸಿ ಬಸ್ ಚಾಲಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಘಟನೆಯಿಂದಾಗಿ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.
ನಾಗಯ್ಯಸ್ವಾಮಿ (45) ಹತ್ಯೆಗೀಡಾದ ಬಸ್ ಚಾಲಕನಾಗಿದ್ದು, ಇವರು ಮೂಲತಃ ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಾಗಯ್ಯಸ್ವಾಮಿ, ಸದ್ಯ ಕಲಬುರಗಿಯ ಮಹಾದೇವ ನಗರದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಇಂದು ಬೆಳಗ್ಗೆ ಎರಡು ರೌಂಡ್ ಮಿನಜಗಿಗೆ ಹೋಗಿ ಬಂದಿದ್ದ ನಾಗಯ್ಯಸ್ವಾಮಿ ಅವರು, ಮಧ್ಯಾಹ್ನ 1:30 ರ ಸುಮಾರಿಗೆ ಮಿನಜಗಿಯಿಂದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣಕ್ಕೆ ಬಸ್ ಚಲಾಯಿಸಿಕೊಂಡು ಬಂದಿದ್ದಾರೆ. ಬಸ್ ನಿಂದ ಇಳಿಯುತ್ತಿದ್ದಂತೆಯೇ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳ ದಾಳಿಯಿಂದ ಹೆಬ್ಬೆರಳು ತುಂಡಾದ ವೇಳೆ ಚಾಲಕ ಬಸ್ ನಿಲ್ದಾಣದೊಳಗೆ ಓಡಿದ್ದಾರೆ. ಈ ವೇಳೆ ಅವರನ್ನು ಬೆನ್ನಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ.
ಇನ್ನೂ ಕೃತ್ಯದ ಸ್ಥಳದಿಂದ ಪರಾರಿಯಾಗುವ ವೇಳೆ ಸ್ವಲ್ಪ ದೂರದಲ್ಲಿದ್ದ ಮತ್ತೊಂದು ಬಸ್ಸಿನೊಳಗೆ ಹತ್ಯೆಗೆ ಬಳಸಿದ ಮಾರಕಾಸ್ತ್ರಗಳನ್ನು ಆರೋಪಿಗಳು ಎಸೆದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಆಡೂರು ಶ್ರೀನಿವಾಸಲು, ಬ್ರಹ್ಮಪುರ ಠಾಣೆ ಪೊಲೀಸರು, ಬೆರಳಚ್ಚು, ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























