ಗೂಡ್ಸ್ ರೈಲಿನಡಿಗೆ ಬಿದ್ದು 20ಕ್ಕೂ ಅಧಿಕ ಎಮ್ಮೆಗಳು ಸಾವು

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು ಸುಮಾರು 20 ಕ್ಕಿಂತ ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಬೈಕಂಪಾಡಿಯ ಅಂಗರಗುಂಡಿ ಬಳಿ ನಡೆದಿದೆ.
ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.
ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ. ವೇಗ ನಿಯಂತ್ರಣ ಮಾಡಿದ ರೈಲು ಆಪರೇಟರ್ ರೈಲು ಪಲ್ಟಿ ಆಗುವ ಅಪಾಯವನ್ನು ತಪ್ಪಿಸಿದ್ದಾರೆ. ಮಹಾ ನಗರಪಾಲಿಕೆ ಬೀಡಾಡಿ ದನಗಳನ್ನು ನಿಯಂತ್ರಣ ಮಾಡದಿದ್ದರೆ ಇನ್ನಷ್ಟು ದುರಂತ ಸಂಭವಿಸಬಹುದು ಎಂದು ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬರ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw