ಮದ್ಯದ ಮತ್ತಿನಲ್ಲಿ ಆರಂಭವಾದ ವಲಸೆ ಕಾರ್ಮಿಕರ ಗಲಾಟೆ ಕೊಲೆಯಲ್ಲಿ ಅಂತ್ಯ!

ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ವಲಸೆ ಕಾರ್ಮಿಕರ ಮಧ್ಯೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗಂಗೊಳ್ಳಿ ಕಟ್ಟಿನಮಕ್ಕಿ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ.
ಕೊಲೆಯಾದವರನ್ನು ಬಾಗಲಕೋಟೆ ಮೂಲದ ಸಂಗಪ್ಪಯಾನೆ ಸಂಗಮೇಶ (42) ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ರಾಜಾ(36) ಕೊಲೆ ಆರೋಪಿ.
ವಲಸೆ ಕಾರ್ಮಿಕರಾಗಿರುವ ಇವರಿಬ್ಬರು ಕುಂದಾಪುರದಲ್ಲಿ ನೆಲೆಸಿದ್ದು, ಆಲೂರು ಗ್ರಾಪಂ ವ್ಯಾಪ್ತಿಯ ಕಟ್ಟಿನಮಕ್ಕಿಯ ನಾಗೇಂದ್ರ ಆಚಾರ್ಯ ಎಂಬವರ ಗುತ್ತಿಗೆ ಕೆಲಸ ಮಾಡುತ್ತಿದ್ದರು. ಹಾಗಾಗಿ ಇವರು ಅಲ್ಲೇ ಶೆಡ್ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಮದ್ಯ ಸೇವಿಸಿದ್ದ ಇವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿದ್ದು ಈ ವೇಳೆ ರಾಜಾ, ಶೆಡ್ ಎದುರಿನ ಮನೆ ಪಂಚಾಂಗದ ಮೇಲೆ ಮಲಗಿದ್ದ ಸಂಗಮೇಶ ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿರುವುದಾಗಿ ದೂರಲಾಗಿದೆ.
ಬಳಿಕ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ, ಗಂಗೊಳ್ಳಿ ಠಾಣೆಯ ಪಿಎಸ್ಐ ವಿನಯ್ ಎಂ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw