ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ: ಮಳೆಯ ಅಬ್ಬರಕ್ಕೆ ಆತಂಕಗೊಂಡ ನಗರ ನಿವಾಸಿಗಳು! - Mahanayaka
12:59 AM Wednesday 10 - September 2025

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ: ಮಳೆಯ ಅಬ್ಬರಕ್ಕೆ ಆತಂಕಗೊಂಡ ನಗರ ನಿವಾಸಿಗಳು!

chikkamagaluru rain
25/05/2023

ಚಿಕ್ಕಮಗಳೂರು:  ಚಿಕ್ಕಮಗಳೂರಿನಲ್ಲಿ  ಧಾರಾಕಾರ ಮಳೆಯಾಗಿದ್ದು, ಮಳೆ ಅಬ್ಬರ ಕಂಡು ನಗರ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಸುಮಾರು ಅರ್ಧಗಂಟೆಗಳಿಗಿಂತಲೂ ಹೆಚ್ಚು ಕಾಲ ಮಳೆ ಸುರಿದಿದೆ.


Provided by

ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ. ದಿಢೀರನೇ ಆರಂಭವಾದ ಮಳೆಯಿಂದಾಗಿ ನಗರಕ್ಕೆ ಆಗಮಿಸಿದ್ದ ಜನ ಸಾಮಾನ್ಯರು ಅತಂತ್ರರಾಗುವ ಪರಿಸ್ಥಿತಿ ನಿರ್ಮಾಣವಾಯಿತು.

ಕಳೆದೊಂದು ವಾರದಿಂದ ಮೋಡ ಕಡುಗಟ್ಟುತ್ತಿತ್ತು, ಮಳೆಯಾಗಿರಲಿಲ್ಲ. ಇಂದು ದಿಢೀರನೆ ಆರಂಭವಾದ ಧಾರಾಕಾರ ಮಳೆಗೆ ಜನ ಕಂಗಾಲಾಗಿದ್ದಾರೆ.

ಮಳೆ ಹಾನಿ ಪ್ರದೇಶಕ್ಕೆ ಶಾಸಕ ತಮ್ಮಯ್ಯ ಭೇಟಿ:

thammaiah

ಚಿಕ್ಕಮಗಳೂರಿನ  ಸಖರಾಯಪಟ್ಟಣದಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿತ್ತು. ಆಲಿಕಲ್ಲು ಮಳೆಯ ಪರಿಣಾಮ ಮನೆಯ ಮೇಲ್ಛಾವಣಿಯ ಶೀಟ್ ಗಳು ಹಾರಿ ಹೋಗಿದ್ದವು, ಕೆಲ ಮನೆಯ ಹೆಂಚುಗಳು ಒಡೆದು ಹೋಗಿದ್ದವು, ಆಗಲೇರಿ ಗ್ರಾಮದ ಮಂಗಳಮ್ಮ, ರತ್ನಮ್ಮ, ರಂಗಣ್ಣ ಎಂಬುವರ ಮನೆಗೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಭೇಟಿ ನೀಡಿದ ಶಾಸಕ ತಮ್ಮಯ್ಯ ಮಳೆಯಿಂದ ಮನೆ ಹಾನಿಯಾದ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಮಳೆಯಿಂದ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಹಾಗೂ ರೆವೆನ್ಯೂ ಇನ್ಸ್ಪೆಕ್ಟರ್ ಗೆ ಶಾಸಕರು ಇದೇ ವೇಳೆ ಸೂಚನೆ ನೀಡಿದರು. ಮನೆಗಳಿಗೆ ತುರ್ತಾಗಿ ಟಾರ್ಪಲ್ ವ್ಯವಸ್ಥೆ ಮಾಡಲು ಪಿಡಿಓಗೆ ಸೂಚನೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ