ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾಲಿಹಾತ್ ಹೃದಯಾಘಾತದಿಂದ ನಿಧನ - Mahanayaka
12:52 PM Wednesday 10 - September 2025

ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾಲಿಹಾತ್ ಹೃದಯಾಘಾತದಿಂದ ನಿಧನ

salihat
31/05/2023

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.


Provided by

ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದರು. ಸದ್ಯ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದರು. ಹೃದಯದ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬೆಳಗ್ಗೆ ಅವರು ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9ನೇ ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿದ್ದ ಸಾಲಿಯತ್, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದಿದ್ದ ಇವರು, ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು. ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಶನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ