ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್!

ಸ್ಯಾಂಡಲ್ ವುಡ್ ನಟಿ ರಚಿತಾರಾಮ್ ಅವರು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಅವರು, ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ.
ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾರಾಮ್ ಹೇಳಿದರು.ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw