ಅನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಸೇರಿ ಐವರು ಅರೆಸ್ಟ್: ಕಮೀಷನರ್ ಕುಲದೀಪ್ ಕುಮಾರ್ ಜೈನ್
ಮಂಗಳೂರು ನಗರದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಒಬ್ಬ ಅಪ್ರಾಪ್ತ ಸೇರಿ ಐವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.
ಉಳ್ಳಾಲ ಠಾಣೆಗೆ ಭೇಟಿ ನೀಡಿ, ವಸ್ತುಸ್ಥಿತಿ ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನೈತಿಕ ಪೊಲೀಸ್ ಗಿರಿ ನಡೆಸಿದವರ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನ ರಚಿಸಿದ್ದೆವು. ಈಗಾಗಲೇ ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ತಲಪಾಡಿಯ ಸಚಿನ್, ತಲಪಾಡಿ ನಿವಾಸಿಗಳಾದ ಸುಹೇನ್ ,ಅಖಿಲ್ ಮತ್ತು ಓರ್ವ ಅಪ್ರಾಪ್ತನನ್ನ ಬಂಧಿಸಲಾಗಿದೆ.
ಇದೇ ವೇಳೆ ಠಾಣೆಗೆ ಹಿಂದೂ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಅಮಾಯಕರನ್ನ ಬಂಧಿಸದಂತೆ ಕಮಿಷನರ್ ಅವರಲ್ಲಿ ಮನವಿ ಮಾಡಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ವೇಳೆ ಕೇರಳ ಮೂಲದ ಆರು ಮಂದಿ ವಿಹಾರಕ್ಕೆಂದು ಬಂದಿದ್ದರು.ಇವರಲ್ಲಿ ಮೂವರು ಯುವತಿಯರ ಜತೆ ಇದ್ದ ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ಸಂಶಯದ ಮೇಲೆ ತಂಡವೊಂದು ಇವರನ್ನು ಹಿಂಬಾಲಿಸಿ ಹಲ್ಲೆ ನಡೆಸಿತ್ತು.ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ಈ ಕೃತ್ಯ ಎಸಗಿದ್ದು ಇದರಿಂದ ಮೂವರು ಯುವಕರು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























