ಅನೈತಿಕ ಪೊಲೀಸ್ ಗಿರಿ: ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ - Mahanayaka

ಅನೈತಿಕ ಪೊಲೀಸ್ ಗಿರಿ: ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ

moral police
02/06/2023


Provided by

ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಏಳಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.

ಬಂಧಿತರನ್ನು  ಭವೀಶ್ ಬಸ್ತಿಪಡ್ಪು, ಜೀತು ಎಂದು ಗುರುತಿಸಲಾಗಿದೆ. ಇದಕ್ಕಿಂತ ಮುಂಚೆ ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹೇನ್ ತಲಪಾಡಿ, ಅಖಿಲ್ ತಲಪಾಡಿ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ವೇಳೆ  ಕೇರಳ ಮೂಲದ ಆರು ಮಂದಿ  ವಿಹಾರಕ್ಕೆಂದು‌  ಬಂದಿದ್ದರು. ಇವರಲ್ಲಿ ಮೂವರು ಯುವತಿಯರ ಜತೆ ಇದ್ದ ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ಸಂಶಯದ ಮೇಲೆ ತಂಡವೊಂದು ಇವರನ್ನು ಹಿಂಬಾಲಿಸಿ ಹಲ್ಲೆ ನಡೆಸಿತ್ತು.

ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ಈ ಕೃತ್ಯ ಎಸಗಿದ್ದು  ಇದರಿಂದ ಮೂವರು  ಯುವಕರು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ