200 ಯುನಿಟ್ ವಿದ್ಯುತ್ ಫ್ರೀ ಘೋಷಣೆ ಬೆನ್ನಲ್ಲೇ ಕರೆಂಟ್ ದರ ಹೆಚ್ಚಳ ಶಾಕ್ - Mahanayaka

200 ಯುನಿಟ್ ವಿದ್ಯುತ್ ಫ್ರೀ ಘೋಷಣೆ ಬೆನ್ನಲ್ಲೇ ಕರೆಂಟ್ ದರ ಹೆಚ್ಚಳ ಶಾಕ್

power price
03/06/2023

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ.

ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC ಆದೇಶ ಹೊರಡಿಸಿದೆ.

ಮೇ 12ರಂದು KERC ವಿದ್ಯುತ್ ಪರಿಷ್ಕರಣೆ ಮಾಡಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ವಿದ್ಯುತ್ ದರ ಜೂ. 1 ರಿಂದಲೇ ಜಾರಿಯಲ್ಲಿದೆ.

ಈ ಹಿಂದೆ ಏಪ್ರಿಲ್ 1 ರಿಂದ ಹೊಸ ದರ ಅನ್ವಯವಾಗಲಿದೆ ಎಂದು KERC ಹೇಳಿತ್ತು. ಆದರೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ದರ ಹೆಚ್ಚಳ ಆದೇಶಕ್ಕೆ ತಡೆ ಬಿದ್ದಿತ್ತು.  ಇದೀಗ ಕೆಇಆರ್‌ ಸಿ ಜೂನ್ 1 ರಿಂದ ಪರಿಷ್ಕೃತ ದರವನ್ನು ಜಾರಿ ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ