ಅಗ್ನಿ ಆಕಸ್ಮಿಕ: ಹೊತ್ತಿ ಉರಿದ ಸರ್ಕಾರಿ ಶಾಲೆ, ಪೀಠೋಪಕರಣ ಭಸ್ಮ - Mahanayaka

ಅಗ್ನಿ ಆಕಸ್ಮಿಕ: ಹೊತ್ತಿ ಉರಿದ ಸರ್ಕಾರಿ ಶಾಲೆ, ಪೀಠೋಪಕರಣ ಭಸ್ಮ

chamarajanagara
04/06/2023


Provided by

ಚಾಮರಾಜನಗರ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಶಾಲೆಯ ಕೊಠಡಿಯಲ್ಲಿದ್ದ ಪುಸ್ತಕ, ಬೆಂಚ್‍ ಗಳು ಸುಟ್ಟು ಕರಕಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದಲ್ಲಿ ಭಾನುವಾರ ಸಂಜೆ ವೇಳೆ ನಡೆದಿದೆ.

ಹಂಗಳ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಶೇಖರಿಸಿಟ್ಟ 50ಕ್ಕೂ ಅಧಿಕ ಹಳೇ ಬೆಂಚ್, ಟೇಬಲ್, ಚೇರ್, ಪುಸ್ತಕ ಸೇರಿದಂತೆ ಮಕ್ಕಳ ಕಲಿಕಾ ಸಂಬಂಧಿತ ಸಾಮಾಗ್ರಿಗಳು ಸುಟ್ಟು ಹೋಗಿದೆ. ಜೊತೆಗೆ ಶಾಲೆಯಲ್ಲಿ ಅಳವಡಿಕೆ ಮಾಡಿದ್ದ ಶುದ್ಧ ಕುಡಿಯುವ ನೀರಿನ ಘಟಕವು ಕೂಡ ಬೆಂಕಿಗಾಹುತಿಯಾಗಿದೆ.

ಮಾಹಿತಿ ಅರಿತ ಸ್ಥಳೀಯರು ಬಿಂದಿಗೆಯಲ್ಲಿ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಆದರೆ ಬೆಂಕಿ ನಿಯಂತ್ರಣಕ್ಕೆ ಬಾರದ ಧಗಧಗಿಸಿದ ಹಿನ್ನೆಲೆ ಅಗ್ನಿ ಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವ ಕೆಲಸ ಮಾಡುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಇದಕ್ಕೆ ಸ್ಥಳೀಯರು ಕೂಡ ಸಾಥ್ ನೀಡಿದರು. ಘಟನೆಯಿಂದ ಕೊಠಡಿಯ ಕಿಟಕಿ, ಬಾಗಿಲು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಗಾರೆಯ ಚೆಕ್ಕೆಗಳು ಎಡೆದು ಬೀಳಲಾರಂಭಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ