ಮಲೆಯಾಳಂ ಹಾಸ್ಯ ನಟ ಕೊಲ್ಲಂ ಸುಧಿ ಅಪಘಾತಕ್ಕೆ ಬಲಿ

ತ್ರಿಶ್ಶ್ಯೂರ್: ಮಲೆಯಾಳಂ ಹಾಸ್ಯ ನಟ ಕೊಲ್ಲಂ ಸುಧಿ(39) ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಇವರ ಜೊತೆಗಿದ್ದ ಕಿರುತೆರೆ ತಾರೆಯರಾದ ಬಿನು ಅಡಿಮಲಿ, ಉಲ್ಲಾಸ್ ಆರೂರ್ ಮತ್ತು ಮಹೇಶ್ ಎಂಬವರು ಗಾಯಗೊಂಡಿದ್ದಾರೆ.
ಕೋಝಿಕ್ಕೋಡ್ ನಲ್ಲಿ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮ ಮುಗಿಸಿ ವಡಕರದಿಂದ ಹಿಂದಿರುಗುತ್ತಿದ್ದ ವೇಳೆ ಕಯ್ಪಮಂಗಲಂ ಪಣಾಂಬಿಕುನ್ ಎಂಬಲ್ಲಿ ಪಿಕಪ್ ವೊಂದು ಇವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಸುಧಿ ಅವರನ್ನು ಕೊಡಂಗಲ್ಲೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಕೊಡಂಗಲ್ಲೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕೊಲ್ಲಂ ಸುಧಿ ಅವರು ಸಿನಿಮಾ ಹಾಗೂ ಕಿರುತೆರೆ ಕಾರ್ಯಕ್ರಮಗಳಲ್ಲಿ ನಕ್ಕುನಗಿಸುವ ಕಲಾವಿದರಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw