ಅನೈತಿಕ ಸಂಬಂಧದ ಅನುಮಾನ: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ!

ಬೆಂಗಳೂರು: ಗಂಡನೇ ಹೆಂಡ್ತಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.
ಅನಾಥಾಶ್ರಮದಲ್ಲಿದ್ದ ನಾಗರತ್ನಳನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಳು. ಅಯ್ಯಪ್ಪ, ತನ್ನ ಅಕ್ಕನ ಮನೆಯಲ್ಲಿ ಮಕ್ಕಳನ್ನು ಬಿಟ್ಟಿದ್ದ. ಇತ್ತೀಚೆಗೆ ಹೆಂಡತಿ ಮೇಲೆ ಅನುಮಾನ ಪಟ್ಟಿದ್ದ ಅಯ್ಯಪ್ಪ, ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೆದಿತ್ತು.
ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಸವೇಶ್ವರ ನಗರ ಪೊಲೀಸರಿಂದ ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw