ಯುವಕನ ಎದೆಗೆ ರಾಡ್ ನಿಂದ ಹೊಡೆದು ಕೊಲೆ!

ವ್ಯಕ್ತಿಯೊಬ್ಬ ಯುವಕನ ಎದೆಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಗಳೂರು ನಗರದ ಕೂಳೂರಿನಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಕೊಲೆಗೈದ ಆರೋಪಿ. ಮೂಲತಃ ಪಶ್ಚಿಮ ಬಂಗಾಳದ ಪ್ರಸ್ತುತ ಕುಳೂರಿನಲ್ಲಿ ವಾಸವಾಗಿರುವ ಬಿಕಾಸ್ ಗುನಿಯಾ (22) ಕೊಲೆಯಾದ ಯುವಕ. ಕೊಲೆಯಾದ ಬಿಕಾಸ್ ಗುನಿಯಾ ಮತ್ತು ಆರೋಪಿ ವಾಸುದೇವ ಗುನಿಯಾ ಪಶ್ಚಿಮ ಬಂಗಳಾದವರಾಗಿದ್ದು, ಕುಳೂರಿನಲ್ಲಿ ಗಾರೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು.
ವಾಸುದೇವ ಗುನಿಯಾನಿಗೆ ಬಿಕಾಸ್ ಗುನಿಯಾ ಊರಿನ ಯುವತಿಯ ಜತೆ ಹಲವು ವರ್ಷದ ಹಿಂದೆ ಮದುವೆಯಾಗಿತ್ತು. ಆತನ ಪತ್ನಿ ಪಶ್ಚಿಮ ಬಂಗಳಾದಲ್ಲೇ ವಾಸ್ತವ್ಯವಿದ್ದಳು. ಆಕೆಯ ಜತೆ ಬಿಕಾಸ್ ಗುನಿಯಾನಿಗೆ ಅಕ್ರಮ ಸಂಬಂಧವಿದೆ, ಮೊಬೈಲ್ ಮೂಲಕ ಮಾತನಾಡುತ್ತಾನೆ ಎಂಬ ಸಂಶಯ ವ್ಯಕ್ತಪಡಿಸಿದ ಆರೋಪಿಯು ಈ ವಿಚಾರದಲ್ಲಿ ಹಲವು ಬಾರಿ ಗಲಾಟೆ ಮಾಡಿದ್ದ.
ವಾಸುದೇವ ಗುನಿಯಾ ಪಾನಮತ್ತನಾಗಿ ಅಕ್ರಮ ಸಂಬಂಧದ ನೆಪದಲ್ಲಿ ಬಿಕಾಸ್ ಜತೆ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಆರೋಪಿ ವಾಸುದೇವ ರಾಡ್ ನಿಂದ ಬಿಕಾಸ್ ನ ಎದೆಗೆ ಗುದ್ದಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಬಿಕಾಸ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw