ಹತ್ಯೆಗೀಡಾದ ಫಾಝಿಲ್, ಮಸೂದ್, ಜಲೀಲ್ ಕುಟುಂಬಗಳಿಗೆ ಪರಿಹಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್ - Mahanayaka
6:52 PM Sunday 14 - September 2025

ಹತ್ಯೆಗೀಡಾದ ಫಾಝಿಲ್, ಮಸೂದ್, ಜಲೀಲ್ ಕುಟುಂಬಗಳಿಗೆ ಪರಿಹಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

g parameshwar
06/06/2023

ಮಂಗಳೂರಲ್ಲಿ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.


Provided by

ಅವರು ಮಂಗಳೂರಿನಲ್ಲಿರೋ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಆಡಳಿತದಲ್ಲಿ ಮತೀಯ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಈ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ ಎಂದರು.

ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ.  ಕೋಮು ಸಾಮರಸ್ಯ ತರಲು ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್ ಗಿರಿ ನಡೆದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ನೈತಿಕ ಪೊಲೀಸ್ ಗಿರಿ ನಡೆಯಲು ಅವಕಾಶವೇ ಕೊಡಬಾರದು. ಯುವ ಸಮೂಹದಲ್ಲಿ ಡ್ರಗ್ಸ್ ಗೆ ಬಲಿಯಾಗಿದೆ. ಡ್ರಗ್ಸ್ ದಂಧೆ ತಡೆಯೋಕೆ ಆಗದ ರೀತಿಯಲ್ಲಿ ಬೆಳೆಯುತ್ತಿದೆ. ಆಗಸ್ಟ್ 15ರೊಳಗೆ ಕರಾವಳಿಯಲ್ಲಿ ಯಾವುದೇ ಡ್ರಗ್ಸ್ ಸಿಗಬಾರದಂತೆ ಕ್ರಮ ತೆಗೆದುಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.

ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಬಗ್ಗೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ಮೊದಲಿಗೆ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ  ಮಾಡುತ್ತೇವೆ. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ