ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕಕಾಲಕ್ಕೆ 'ಶಕ್ತಿ'ಗೆ ಚಾಲನೆ - Mahanayaka

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕಕಾಲಕ್ಕೆ ‘ಶಕ್ತಿ’ಗೆ ಚಾಲನೆ

banglore
09/06/2023


Provided by

ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ.ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು.

ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಾನು (ಮುಖ್ಯಮಂತ್ರಿಗಳು) ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ