ಮಶ್ರೂಮ್ ಫ್ಯಾಕ್ಟರಿಯ ದುರ್ನಾತದಿಂದ ಕಂಗೆಟ್ಟ ಜನ: ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರ - Mahanayaka
11:21 AM Wednesday 22 - October 2025

ಮಶ್ರೂಮ್ ಫ್ಯಾಕ್ಟರಿಯ ದುರ್ನಾತದಿಂದ ಕಂಗೆಟ್ಟ ಜನ: ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರ

protest
09/06/2023

ಮಂಗಳೂರಿನ ವಾಮಂಜೂರಿನ ತಿರುವೈಲ್ ವಾರ್ಡ್ ನಲ್ಲಿ ಸ್ಥಾಪಿಸಲಾಗಿರುವ ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಮಶ್ರೂಮ್ ಫ್ಯಾಕ್ಟರಿಯನ್ನು ಮುಚ್ಚಬೇಕೆಂದು ಆಗ್ರಹಿಸಿ ತಿರುವೈಲು ಗ್ರಾಮದ  200ಕ್ಕೂ ಹೆಚ್ಚಿನ ಕುಟುಂಬಗಳು ಅನಿರ್ದಿಷ್ಟ ಅವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿತು.

ವಾಮಂಜೂರಿನಿಂದ ಅಣಬೆ ಫ್ಯಾಕ್ಟರಿಗೆ ಹೋಗುವ ದಾರಿಯಲ್ಲಿ ಟೆಂಟ್ ಹಾಕಿ ಗ್ರಾಮಸ್ಥರು ಧರಣಿ ನಡೆಸಿದ್ರು. ಈ ವೇಳೆ ಸ್ಥಳೀಯ ಅಂಗಡಿ — ಮುಂಗಟ್ಟುಗಳ ಮಾಲಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಧರಣಿಗೆ ಸಾಥ್ ನೀಡಿದರೆ ಆಟೋ ಚಾಲಕರು ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು.

ಧರಣಿ ನಿರತ ಸ್ಥಳಕ್ಕೆ ಬಂದ ಪೊಲೀಸರು ಧರಣಿ ನಿರತರನ್ನು ಮನವರಿಸಲು ಯತ್ನಿಸಿದರು. ಆದರೆ, ಯಾವುದಕ್ಕೂ ಬಗ್ಗದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಧರಣಿ ಮುಷ್ಕರ ನಿರತರು, ಕೊರೊನ ಸಂದರ್ಭದಲ್ಲಿ ಚಾಕಲೇಟ್ ತಯಾರಿಕಾ ಘಟಕ ಸ್ಥಾಪಿಸಲಾಗಿತ್ತು. ಆ ಬಳಿಕ ಇಲ್ಲಿ ಅಣಬೆ ಬೆಳೆಯಲು ಆರಂಭಿಸಿದ್ದಾರೆ. ಇದರಿಂದ ಬರುವ ದುರ್ನಾತದಿಂದ ವಾಮಂಜೂರು ವ್ಯಾಪ್ತಿಯಲ್ಲಿ ವಾಸಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.

ಇನ್ನು ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ಅಣಬೆ ಉತ್ಪಾದನಾ ಫ್ಯಾಕ್ಟರಿಯಿಂದ ಸ್ಥಳೀಯ ನಾಗರಿಕರಿಗೆ ಅನಾರೋಗ್ಯ ಸಮಸ್ಯೆ ಎದುರಾಗುತ್ತಿದ್ದು, ತಕ್ಷಣ ಮುಚ್ಚುವಂತೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಎರಡನೆಯ ದಿನದ ಪ್ರತಿಭಟನೆಯಲ್ಲಿ ಭಾಗವಹಿಸಿದ ಶಾಸಕ ಭರತ್ ಶೆಟ್ಟಿ ಅವರು ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ