ಉಡುಪಿಗೆ ಆಗಮಿಸಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್

ಉಡುಪಿ, ಜೂ.11: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಗೊಂಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಇಂದು ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದರು.
ಜಿಲ್ಲೆಗೆ ಆಗಮಿಸಿದ ಸಚಿವರು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಪ್ರಸಾದ್ ರಾಜ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ ಮೊದಲಾದವರು ಹಾಜರಿದ್ದರು.
ಬಳಿಕ ಸಚಿವರು ಉಡುಪಿ ಶ್ರೀಕೃಷ್ಣಮಠಕ್ಕೆ ಆಗಮಿಸಿದ ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ, ಉದಯಕುಮಾರ್ ಶೆಟ್ಟಿ ಮುನಿಯಾಲು, ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw