ಯುಪಿಎಸ್‌ ಸಿ ಸಿಎಪಿಎಫ್‌ ಪರೀಕ್ಷೆಯಲ್ಲಿ ಪಾಸ್ ಆದ ಜಮ್ಮುವಿನ ಮೊದಲ ಯುವತಿ ಸಿಮ್ರಾನ್‌ ಬಾಲಾ - Mahanayaka

ಯುಪಿಎಸ್‌ ಸಿ ಸಿಎಪಿಎಫ್‌ ಪರೀಕ್ಷೆಯಲ್ಲಿ ಪಾಸ್ ಆದ ಜಮ್ಮುವಿನ ಮೊದಲ ಯುವತಿ ಸಿಮ್ರಾನ್‌ ಬಾಲಾ

11/06/2023

ಕೇಂದ್ರ ಲೋಕಸೇವಾ ಆಯೋಗ ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಗಳ ಪರೀಕ್ಷೆಯಲ್ಲಿ ಜಮ್ಮು-ಕಾಶ್ಮೀರದ ನೌಶೆರಾ ಪಟ್ಟಣದ ನಿವಾಸಿ ಸಿಮ್ರಾನ್‌ ಬಾಲಾ ಅವರು ತೇರ್ಗಡೆಯಾಗಿದ್ದಾರೆ. ಈ ಮೂಲಕ ಇವರು ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ವರ್ಷ ಯುಪಿಎಸ್‌ಸಿ ಸಿಎಪಿಎಫ್‌ಗೆ ಅರ್ಹತೆ ಪಡೆದ 151 ಅಭ್ಯರ್ಥಿಗಳ ಪೈಕಿ 82ನೇ ರ‍್ಯಾಂಕ್‌ ಪಡೆಯುವ ಮೂಲಕ ಸಿಮ್ರಾನ್‌ ಬಾಲಾ ಅವರು ಇತಿಹಾಸ ನಿರ್ಮಿಸಿದ್ದಾರೆ.

ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಜಮ್ಮು ಮತ್ತು ಕಾಶ್ಮೀರದ ಏಕೈಕ ಯುವತಿ ಇವರು.
ಈ ಕುರಿತು ಸಂತಸ ವ್ಯಕ್ತಪಡಿಸಿದ ಸಿಮ್ರಾನ್, ‘ನನ್ನ ಕನಸು ನನಸಾಗಿದೆ. ಈ ಬಗ್ಗೆ ನನಗೆ ಹೆಮ್ಮೆ ಎನಿಸುತ್ತಿದೆ. ನಾನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಹಾಯಕ ಕಮಾಂಡೆಂಟ್ ಆಗಿ ನೇಮಕಗೊಂಡಿದ್ದೇನೆ. ನನ್ನ ಕರ್ತವ್ಯವನ್ನು ಉತ್ಸಾಹದಿಂದ ನಿರ್ವಹಿಸುತ್ತೇನೆ. ನನ್ನ ಯಶಸ್ಸಿನ ಬಗ್ಗೆ ಕುಟುಂಬ ಮತ್ತು ನನ್ನ ನೆರೆಹೊರೆಯವರು ಹೆಮ್ಮೆಪಡುತ್ತಾರೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.

ಇನ್ನು ಮುಂದುವರಿದು ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶದವಳು. ನನ್ನ ಪ್ರದೇಶದಲ್ಲಿ ಗಡಿಯಾಚೆಗಿನ ಗುಂಡಿನ ದಾಳಿಗಳನ್ನು ನಾನು ನೋಡಿದ್ದೇನೆ. ಇದು ನನ್ನನ್ನು ಸಿಎಪಿಎಫ್‌ಗೆ ಸೇರಲು ಪ್ರೇರೇಪಿಸಿತು. ಇದರಿಂದ ನಾನು ಗಡಿ ಪ್ರದೇಶದಲ್ಲಿಯೂ ಸೇವೆ ಸಲ್ಲಿಸಬಹುದು’ ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ