ಕಾರು—ಲಾರಿ ನಡುವೆ ಭೀಕರ ಅಪಘಾತ: ಮೂರು ತಿಂಗಳ ಮಗು ಸಹಿತ ಮೂವರು ಸಾವು

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ತಾಲೂಕಿನ ವಿಜಯಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಬೆಂಗಳೂರಿನ ಹೆಚ್.ಎಸ್.ಆರ್.ಬಡವಾಣೆ ನಿವಾಸಿಗಳಾದ ಜಾಕೀರ್ ಅಹ್ಮದ್(60), ತಬಸ್ಸೂಮ್(28) ಹಾಗೂ ಮೂರು ತಿಂಗಳ ಮಗು ಹಯಾತ್ ಫಾತಿಮಾ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ನಯಾಜ್(22), ಇಮ್ರಾನ್ ಖಾನ್(32), ತಬ್ರೀಜ್ ಅಹ್ಮದ್(27) ಸಬಾ(26) ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಲಾರಿಗೆ ಅಪ್ಪಳಿಸಿದೆ. ಪರಿಣಾಮವಾಗಿ ಮೂವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw