ಇಂದಿನಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪಚುನಾವಣೆ - Mahanayaka

ಇಂದಿನಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪಚುನಾವಣೆ

by election
13/06/2023

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದಕ್ಕೆ ಜೆಡಿಎಸ್ ತೀರ್ಮಾನಿಸಿದೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನುಮಾನ. ಹೀಗಾಗಿ ಕಾಂಗ್ರೆಸ್ನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.

ವಿಧಾನ ಪರಿಷತ್ನಲ್ಲಿ ತೆರವಾದ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಜೂ. 30ಕ್ಕೆ ಮತದಾನ ನಡೆಯಲಿದೆ.ಮೂರು ಸ್ಥಾನಗಳು ಬೇರೆ ಬೇರೆ ಅವಧಿಯಲ್ಲಿ ಮುಕ್ತಾಯಗೊಳ್ಳುವುದರಿಂದ ಪ್ರತ್ಯೇಕವಾಗಿ ಮೂರು ಅಧಿಸೂಚನೆಯನ್ನು ಪ್ರಕಟಿಸಲಾಗುತ್ತದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಿದ್ದು, ಒಂದೇ ದಿನ ಮೂರು ಸ್ಥಾನಗಳಿಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ.

ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ.
ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದಕ್ಕೆ ಜೆಡಿಎಸ್ ತೀರ್ಮಾನಿಸಿದೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನುಮಾನ. ಹೀಗಾಗಿ ಅವಿರೋಧ ಆಯ್ಕೆಯಾಗುವ ನಿರೀಕ್ಷೆಯಿದೆ. ಈ ತಿಂಗಳ 20ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 23ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ.30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ