ಅಕ್ರಮ ಹಣ ವರ್ಗಾವಣೆ ಕೇಸ್: ಆಂಬ್ಯುಲೆನ್ಸ್‌ ನಲ್ಲಿ ಕೂತು ಕಣ್ಣೀರು ಹಾಕಿದ ಬಂಧಿತ ಸಚಿವ ಸೆಂಥಿಲ್ ಬಾಲಾಜಿ - Mahanayaka
9:14 AM Wednesday 20 - August 2025

ಅಕ್ರಮ ಹಣ ವರ್ಗಾವಣೆ ಕೇಸ್: ಆಂಬ್ಯುಲೆನ್ಸ್‌ ನಲ್ಲಿ ಕೂತು ಕಣ್ಣೀರು ಹಾಕಿದ ಬಂಧಿತ ಸಚಿವ ಸೆಂಥಿಲ್ ಬಾಲಾಜಿ

14/06/2023


Provided by

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ವಿ. ಸೆಂಥಿಲ್ ಬಾಲಾಜಿಯವರನ್ನು ಇಡಿ ಬಂಧಿಸಿದೆ.

ವಿಚಾರಣೆಗಾಗಿ ಕರೆದೊಯ್ಯುವ ಮೊದಲು ಈಡಿ ಬಾಲಾಜಿ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಹಲವು ಗಂಟೆಗಳ ವಿಚಾರಣೆ ಬಳಿಕ ಸಚಿವರನ್ನು ಬಂಧಿಸಲಾಯಿತು.

ಬಂಧನದ ನಂತರ ತನಿಖಾ ಸಂಸ್ಥೆ ಬಾಲಾಜಿಯವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಂತೆ, ಚೆನ್ನೈನ ಸರಕಾರಿ ಆಸ್ಪತ್ರೆಯಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು.

ಆಸ್ಪತ್ರೆ ಹೊರಗೆ ಬಾಲಾಜಿ ಅವರ ಬೆಂಬಲಿಗರು ಜಾರಿ ನಿರ್ದೇಶನಾಲಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗ ಡಿಎಂಕೆ ನಾಯಕ ಆಂಬ್ಯುಲೆನ್ಸ್‌ನಲ್ಲಿ ಜೋರಾಗಿ ಅಳುತ್ತಿರುವುದು ಕಂಡುಬಂತು.
ಇದೇ ವೇಳೆ ಅವರ ಬೆಂಬಲಿಗರು ಇಡಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಾಲಾಜಿ ಅವರ ಇಸಿಜಿಯಲ್ಲಿ ವ್ಯತ್ಯಾಸಗಳನ್ನು ಕಂಡಿದ್ದರಿಂದ ವೈದ್ಯರು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು.

ಬಂಧನದ ನಂತರ, ತಮಿಳುನಾಡು ಸಚಿವರಿಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಲು ಸಲಹೆ ನೀಡಲಾಯಿತು. ವೈದ್ಯರು ಅವರ ಹೃದಯದಲ್ಲಿ ಮೂರು ಬ್ಲಾಕ್ ಗಳನ್ನು ಪತ್ತೆ ಹಚ್ಚಿದ್ದಾರೆ.ಹೀಗಾಗಿ ಸೆಂಥಿಲ್ ಬಾಲಾಜಿಯವರನ್ನು ಕೊರೊನರಿ ಆಂಜಿಯೋಗ್ರಾಮ್‌ಗೆ ಒಳಪಡಿಸಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ