ಹೊಟೇಲ್ ಸಿಬ್ಬಂದಿ ಮೇಲೆ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಕ್ರೌರ್ಯ: ಸರ್ಕಾರದಿಂದ ಸಸ್ಪೆಂಡ್ ಶಿಕ್ಷೆ - Mahanayaka
4:53 PM Wednesday 20 - August 2025

ಹೊಟೇಲ್ ಸಿಬ್ಬಂದಿ ಮೇಲೆ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಕ್ರೌರ್ಯ: ಸರ್ಕಾರದಿಂದ ಸಸ್ಪೆಂಡ್ ಶಿಕ್ಷೆ

14/06/2023


Provided by

ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರವು ಅಜ್ಮೀರ್ ಜಿಲ್ಲೆಯಲ್ಲಿನ ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಹೋಟೆಲ್ ಮಕ್ರಾನಾ ರಾಜ್ ನಲ್ಲಿ ಸೋಮವಾರ ಮಧ್ಯರಾತ್ರಿಯ ನಂತರ ಜಗಳ ನಡೆದಿದ್ದು, ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಅಜ್ಮೀರ್ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗಿರಿಧರ್, ವಿಶೇಷ ಕರ್ತವ್ಯ ಅಧಿಕಾರಿ (ಗಂಗಾಪುರ ನಗರ ಪೊಲೀಸ್) ಸುಶೀಲ್ ಕುಮಾರ್ ಬಿಷ್ಣೋಯ್, ಪಟ್ವಾರಿ ನರೇಂದ್ರ ಸಿಂಗ್ ದಹಿಯಾ, ಕಾನ್ಸ್ ಟೇಬಲ್ ಮುಖೇಶ್ ಕುಮಾರ್ ಮತ್ತು ಕೆಳ ವಿಭಾಗದ ಗುಮಾಸ್ತ ಹನುಮಾನ್ ಪ್ರಸಾದ್ ಚೌಧರಿ ಅವರನ್ನು ಅಮಾನತುಗೊಳಿಸಲಾಗಿದೆ. ಇವರ ವಿರುದ್ಧ ಇಲಾಖಾ ತನಿಖೆಗೂ ಆದೇಶಿಸಲಾಗಿದೆ.

ಅಧಿಕಾರಿಗಳು ಮತ್ತು ಕೆಲವು ಪೊಲೀಸರು ಹೋಟೆಲ್ ಸಿಬ್ಬಂದಿಯ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೋಟೆಲ್ ಆಡಳಿತ ಮಂಡಳಿಯು ಪೊಲೀಸ್ ದೂರಿನಲ್ಲಿ ಆರೋಪಿಸಿದೆ. ಜಗಳದ ಸಮಯದಲ್ಲಿ ಇಬ್ಬರೂ ಅಧಿಕಾರಿಗಳು ಕುಡಿದ ಸ್ಥಿತಿಯಲ್ಲಿದ್ದರು ಎಂದು ದೂರುದಾರರು ಆರೋಪಿಸಿದ್ದಾರೆ. ಈ ಕುರಿತು ಅಜ್ಮೀರ್ ಜಿಲ್ಲೆಯ ಗೆಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ