ಹೆಡ್ಗೆವಾರ್, ವೀರ ಸಾವರ್ಕರ್,  ಚಕ್ರವರ್ತಿ ಸೂಲಿಬೆಲೆ ಪಾಠ ಕೈ ಬಿಟ್ಟ ಸರ್ಕಾರ - Mahanayaka
12:33 PM Thursday 21 - August 2025

ಹೆಡ್ಗೆವಾರ್, ವೀರ ಸಾವರ್ಕರ್,  ಚಕ್ರವರ್ತಿ ಸೂಲಿಬೆಲೆ ಪಾಠ ಕೈ ಬಿಟ್ಟ ಸರ್ಕಾರ

hedgewar veera savarkar  chakravarthy sulibele
15/06/2023


Provided by

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆ ಕೈಬಿಡಲು ಕಾಂಗ್ರೆಸ್ ಸಚಿವ ಸಂಪುಟ ಅಸ್ತು ಎಂದಿದ್ದು ಹೆಡ್ಗೆವಾರ್, ವೀರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ಕೈಬಿಡಲಿದೆ.

ಸಂಪುಟ ಸಭೆಯ ಬಳಿಕ ಪಠ್ಯ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ 6 ರಿಂದ 10ನೇ ತರಗತಿಯವರೆಗೆ ಸಮಾಜ ವಿಜ್ಞಾನ ಹಾಗೂ ಕನ್ನಡ ಪಠ್ಯದಲ್ಲಿ ಕೆಲವೊಂದು ಬದಲಾವಣೆ ಮಾಡಲು ನಿರ್ಧಾರ ಮಾಡಿದ್ದು,

6ನೇ ತರಗತಿಯಿಂದ 10ನೇ ತರಗತಿ ವರೆಗೆ ಕೆಲವು ಪಾಠಗಳನ್ನ ಈ ಸಾಲಿನಿಂದಲೇ ಪರಿಷ್ಕರಣೆ ಮಾಡಲು ನಿರ್ಧಾರ ಮಾಡಿದ್ದೇವೆ. ಪಠ್ಯ ಪುಸ್ತಕ ಈಗಾಗಲೇ ಹಂಚಿಕೆ ಆಗಿದೆ. ಆದ್ದರಿಂದ ಹೆಚ್ಚುವರಿ ಪುಸ್ತಕಗಳನ್ನ ಶಾಲೆಗಳಿಗೆ ತಲುಪಿಸುತ್ತೇವೆ. ಅದರಲ್ಲಿ ಕೆಲವು ಶಿಷ್ಟಾಚಾರ ಇರುತ್ತವೆ. ಜ್ಯೋತಿ ಬಾಫುಲೆ, ಅಂಬೇಡ್ಕರ್ ಹಾಗೂ ನೆಹರೂ ಪಾಠಗಳು ಸೇರ್ಪಡೆ ಆಗಿರುತ್ತೆ. ಹೆಡ್ಗೆವಾರ್, ಚಕ್ರವರ್ತಿ ಸೂಲಿಬೆಲೆ ಪಠ್ಯಗಳನ್ನ ಕೈಬಿಟ್ಟಿದ್ದೇವೆ. ಇದು ತಾತ್ಕಾಲಿಕ ಬದಲಾವಣೆ. ಮುಂದೆ ಸಮಿತಿ ಮಾಡಿ ಸಂಪೂರ್ಣ ಪರಿಷ್ಕರಣೆ ಮಾಡಲಾಗುತ್ತದೆ ಎಂದರು.

ರಾಜಪ್ಪ ದಳವಾಯಿ, ರವೀಶ್ ಕುಮಾರ್, ಚಂದ್ರಶೇಖರ, ಅಶ್ವಥ್ ನಾರಾಯಣ, ರಾಜೇಶ್ ಅವರನ್ನೊಳಗೊಂಡ ಸಮಿತಿ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆ ಆಗಿದೆ. ಪಠ್ಯ ಈಗಾಗಲೇ ಮಕ್ಕಳ ಕೈಗೆ ತಲುಪಿರೋದ್ರಿಂದ ವಾಪಸ್ ತರಿಸಿದ್ರೆ, ಹೊಸ ಪುಸ್ತಕಗಳ ಮುದ್ರಣಕ್ಕ ಹೆಚ್ಚಿನ ಹಣ ಖರ್ಚಾಗಲಿದೆ.ಹೀಗಾಗಿ  ಪೂರಕ ಪಠ್ಯ ಕೊಡಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ