ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಳೆದ ವರ್ಷದ ಜುಲೈ 19ರಂದು ಸುಳ್ಯ ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.
ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡು ವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























