ದೈಹಿಕ ಸಂಪರ್ಕ ನಿರಾಕರಿಸುವುದು ಮತ್ತೊಂದು ಕ್ರೌರ್ಯವಲ್ಲ - Mahanayaka
2:46 PM Wednesday 27 - August 2025

ದೈಹಿಕ ಸಂಪರ್ಕ ನಿರಾಕರಿಸುವುದು ಮತ್ತೊಂದು ಕ್ರೌರ್ಯವಲ್ಲ

k high court
20/06/2023


Provided by

ಬೆಂಗಳೂರು: ಪತಿಯಿಂದ ದೈಹಿಕ ಸಂಪರ್ಕ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ಕ್ರೌರ್ಯವಾಗಿದ್ದರೂ‌ ಐಪಿಸಿ ಸೆಕ್ಷನ್ 498A ರ ಅಡಿಯಲ್ಲಿ ಇದು ಕ್ರೌರ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸುವ ಮೂಲಕ ಪತಿ ಹಾಗೂ ಪೋಷಕರ ವಿರುದ್ಧ ಪತ್ನಿ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ವಜಾಗೊಳಿಸಿದೆ.

ಐಪಿಸಿ ಸೆಕ್ಷನ್ 498ಎ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ-1961ರ‌ ಸೆಕ್ಷನ್ 4ರ ಅಡಿಯಲ್ಲಿ ಪತಿ ಹಾಗೂ ಪೋಷಕರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಆರೋಪಪಟ್ಟಿಯನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪತ್ನಿ ಸಲ್ಲಿಸಿದ ದೂರನ್ನು ವಜಾಗೊಳಿಸಿದೆ.

ಪತಿ ಆಧ್ಯಾತ್ಮಿಕ ಸಾಧನೆಯತ್ತ ಮುಖ ಮಾಡಿದ್ದರು, ದೈಹಿಕ ಪ್ರೀತಿಗಿಂತ ಆತ್ಮಗಳ ಪ್ರೀತಿ ಮುಖ್ಯ ಎಂದು ನಂಬಿದ್ದರು. ಪತಿ ತನ್ನ ಹೆಂಡತಿಯೊಂದಿಗೆ ದೈಹಿಕ ಸಂಬಂಧ ಹೊಂದಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಮಹಿಳೆಯೊಬ್ಬರು 2019ರ ಡಿ.18 ರಂದು ವ್ಯಕ್ತಿಯೊಬ್ಬರನ್ನ ವಿವಾಹವಾಗಿದ್ದರು. ವಿವಾಹವಾಗಿ 28 ದಿನ ಜೊತೆಯಲ್ಲಿದ್ದರು. ಇದಾದ ನಂತರ ಪತಿ ಆಧ್ಯಾತ್ಮಿಕ ಸಾಧನೆಯ ಕಡೆ ಮುಖ ಮಾಡಿದ್ದಾರೆ. ಅಲ್ಲದೇ ದೈಹಿಕ ಪ್ರೀತಿಗಿಂತ, ಆತ್ಮಗಳ ಪ್ರೀತಿ ಮುಖ್ಯವೆನ್ನುತ್ತಿದ್ದ ಪತಿ, ಅಧ್ಯಾತ್ಮಿಕ ಸಾಧಕಿಯೊಬ್ಬರ ಉಪನ್ಯಾಸ ವೀಕ್ಷಿಸುವಂತೆ ತನ್ನ ಪತ್ನಿಗೆ ಹೇಳುತ್ತಿದ್ದರು. ಪತಿಯ ನಡೆಯಿಂದ ಮನನೊಂದ ಪತ್ನಿ ದೈಹಿಕ ಸಂಬಂಧದಿಂದ ನಿರಾಸೆ ಹೊಂದಿ ಪತಿ ವಿರುದ್ಧ ದೂರು ದಾಖಲಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ