ಬಸ್ಸಿನಲ್ಲಿ ಯುವತಿಗೆ ಕಿರುಕುಳ: ಅರ್ಚಕ ಸುಬ್ರಹ್ಮಣ್ಯ ಭಟ್ ಎಂಬ ಆರೋಪಿಯ ಬಂಧನ - Mahanayaka

ಬಸ್ಸಿನಲ್ಲಿ ಯುವತಿಗೆ ಕಿರುಕುಳ: ಅರ್ಚಕ ಸುಬ್ರಹ್ಮಣ್ಯ ಭಟ್ ಎಂಬ ಆರೋಪಿಯ ಬಂಧನ

subramanya bhat
24/06/2023


Provided by

ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜತೆ ಸಹ ಪ್ರಯಾಣಿಕನೊಬ್ಬ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಭಟ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಶಹನಾಝ್ (20) ದೂರು ನೀಡಿರುವ ಮಹಿಳೆ. ಉಪ್ಪಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬಸ್ಸಿನಲ್ಲಿ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ ಕಿರುಕುಳ ಪ್ರಕರಣ ನಡೆದಿದೆ ಎಂದು ಮಹಿಳೆ ದೂರಿದ್ದಾರೆ.

ತಾನು ತನ್ನ ತಾಯಿಯೊಂದಿಗೆ ಉಪ್ಪಳದಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಸೀಟಿನ ಮಧ್ಯದಲ್ಲಿ ಕೈಹಾಕಿ ಹಿಂಬದಿ ಸೊಂಟದ ಕೆಳ ಭಾಗವನ್ನು ಹಿಡಿದು ಅಶ್ಲೀಲವಾಗಿ ವರ್ತಿಸಿದ್ದಾನೆ. ಯಾಕೆ ಈ ರೀತಿಯಾಗಿ ವರ್ತಿಸುತ್ತೀರಿ ಎಂದು ಪ್ರಶ್ನಿಸುತ್ತಿದ್ದಂತೆಯೇ ಆತ ಬೊಳುವಾರಿನಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದಾನೆ ಎಂದು ಶಹನಾಝ್‌ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿರುವ ಆರೋಪಿ ಸುಬ್ರಹ್ಮಣ್ಯ ಭಟ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ