ಐಟಿ ಕಂಪೆನಿಯೊಂದರ ಅಕೌಂಟ್ಸ್ ಮ್ಯಾನೇಜರ್ ಸಾವಿಗೆ ಶರಣು

ಮಣಿಪಾಲ: ಬೆಂಗಳೂರಿನ ಐಟಿ ಕಂಪೆನಿಯೊಂದರಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಸಾವಿಗೆ ಶರಣಾದ ಘಟನೆ ಮಣಿಪಾಲ ವಿದ್ಯಾರತ್ನ ನಗರ ಎಂಬಲ್ಲಿ ನಡೆದಿದೆ.
ಮೃತರನ್ನು ಪ್ರಮೋದ್ ಅಂಗಾರ ಜತ್ತನ್ (41) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಕೊನ್ಸೆರೋ ಕಂಪನಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದು ಪ್ರಸ್ತುತ ವರ್ಕ್ ಫ್ರಮ್ ಹೋಮ್ ನಲ್ಲಿ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು.
ಪ್ರಮೋದ್ ಅವರು ಕಛೇರಿ ಕೆಲಸದ ಒತ್ತಡದಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂನ್ 24ರಂದು ರಾತ್ರಿ ಮನೆಯ ಬೆಡ್ ರೂಂ ನಲ್ಲಿ ಫ್ಯಾನಿಗೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಈ ಕುರಿತು ಪ್ರಮೋದ್ ಅವರ ಪತ್ನಿ ಶ್ರೀಜಾ ವಿ. ಕೋಟ್ಯಾನ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw