'ಲೋಕ' ದಲ್ಲಿ ಬಿಜೆಪಿಯನ್ನು ಸೋಲಿಸಲು ಅಖಾಡ ರೆಡಿ: ದೇಶಭಕ್ತ ಪ್ರಜಾಸತ್ತಾತ್ಮಕ ಒಕ್ಕೂಟ ಅಸ್ತಿತ್ವಕ್ಕೆ - Mahanayaka
12:10 AM Thursday 29 - January 2026

‘ಲೋಕ’ ದಲ್ಲಿ ಬಿಜೆಪಿಯನ್ನು ಸೋಲಿಸಲು ಅಖಾಡ ರೆಡಿ: ದೇಶಭಕ್ತ ಪ್ರಜಾಸತ್ತಾತ್ಮಕ ಒಕ್ಕೂಟ ಅಸ್ತಿತ್ವಕ್ಕೆ

26/06/2023

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧಪಕ್ಷಗಳು ಅಖಾಡ ರೆಡಿ ಮಾಡುತ್ತಿದೆ. 16 ವಿರೋಧಪಕ್ಷಗಳ‌ ನಾಯಕರು ಸೇರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜೂನ್ 23 ರಂದು ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ಸಭೆ ನಡೆಸಿದ್ದರು.

ಈ ಸಭೆಯಲ್ಲಿ ಎಡಪಕ್ಷದ ನಾಯಕ ಡಿ.ರಾಜಾ ಅವರು ಪ್ರತಿಪಕ್ಷಗಳ ಮೈತ್ರಿಯ ಹೊಸ ಹೆಸರನ್ನು ಸೂಚಿಸಿದ್ದಾರೆ. ವಿರೋಧ ಪಕ್ಷಗಳ ಮಹಾಮೈತ್ರಿಕೂಟಕ್ಕೆ ‘ದೇಶಭಕ್ತ ಪ್ರಜಾಸತ್ತಾತ್ಮಕ ಒಕ್ಕೂಟ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ.
ಇತ್ತೀಚೆಗಷ್ಟೇ ನಡೆದ ವಿರೋಧ ಪಕ್ಷಗಳ ಸಭೆಯ ನಂತರ ಇದೀಗ ವಿಪಕ್ಷಗಳ ಮೈತ್ರಿಕೂಟಕ್ಕೆ ಹೊಸ ಹೆಸರು ಸೂಚಿಸಲಾಗಿದೆ. ಈ ಮೈತ್ರಿಕೂಟಕ್ಕೆ ಪೇಟ್ರಿಯಾಟಿಕ್ ಡೆಮಾಕ್ರಟಿಕ್ ಅಲಯನ್ಸ್ ಎಂದು ಡಿ.ರಾಜ ಸೂಚಿಸಿದ್ದಾರೆ.

ಮೂಲಗಳ ಪ್ರಕಾರ, ಈ ಹೆಸರಿನ ಬಗ್ಗೆ ಎಲ್ಲಾ ಪಕ್ಷಗಳಲ್ಲಿ ಒಮ್ಮತ ಮೂಡಿದೆ. ಶಿಮ್ಲಾದಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಮುಂದಿನ ಸಭೆಯಲ್ಲಿ ಇದರ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಬಿಹಾರದ ಪಾಟ್ನಾದಲ್ಲಿ ನಡೆದ ಸಭೆಯಲ್ಲಿ 16 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಬಿಜೆಪಿ ವಿರುಧ್ಧ ಲೋಕಸಭಾ ಚುನಾವಣೆಯಲ್ಲಿ ಹೋರಾಟ ನಡೆಸಲು ಸಮರ್ಥ ಒಕ್ಕೂಟ ರಚಿಸುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಬಿಜೆಪಿ ವಿರುದ್ಧ ದೇಶದ ಅತಿದೊಡ್ಡ ಮೈತ್ರಿಕೂಟವಾಗಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಹೆಸರನ್ನು ಘೋಷಿಸಲಿಲ್ಲ, ಆದರೆ ಎಡಪಕ್ಷಗಳ ನಾಯಕ ಡಿ.ರಾಜಾ ಅವರು ಪ್ರತಿಪಕ್ಷಗಳ ಒಗ್ಗಟ್ಟಿನ ಪಕ್ಷಗಳ ಒಕ್ಕೂಟದ ಎಂದು ಹೆಸರು ಸೂಚಿಸಿದ್ದು ಈ ಹೆಸರಿಗೆ ಬಹುತೇಕ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷಗಳ ಮುಂದಿನ ಸಭೆ ಜುಲೈ ತಿಂಗಳ ಎರಡನೇ ವಾರ ಶಿಮ್ಲಾದಲ್ಲಿ ನಡೆಯಲಿದೆ. ಬಿಜೆಪಿ ವಿರೋಧಿ ಪಕ್ಷಗಳ ಸಭೆಯಲ್ಲಿ ದೇಶಭಕ್ತ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಹೆಸರಿಗೆ ಅಂತಿಮ ಮುದ್ರೆ ಬೀಳಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ