ಮಧ್ಯಪ್ರದೇಶದಲ್ಲಿ ಬಿಜೆಪಿಯೇ ಟಾರ್ಗೆಟ್: ‘50% ಲಾವೋ, ಫೋನ್ ಪೇ ಕಾಮ್ ಕರವೋ’ ಚುನಾವಣಾ ಪ್ರಚಾರ ಪ್ರಾರಂಭಿಸಿದ ಕಾಂಗ್ರೆಸ್

ಕರ್ನಾಟಕದಲ್ಲಿ ತನ್ನ ಯಶಸ್ವಿ ಭ್ರಷ್ಟಾಚಾರ ವಿರೋಧಿ ಅಭಿಯಾನದಿಂದ ಸ್ಫೂರ್ತಿ ಪಡೆದ ಮಧ್ಯಪ್ರದೇಶ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಹೊಸ ರೀತಿಯ ಅಭಿಯಾನವನ್ನು ಪ್ರಾರಂಭಿಸಿದೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ನಡೆಸಿದ ‘ಪೇಸಿಎಂ’ ಮತ್ತು ‘40% ಸರ್ಕಾರಾ’ ಅಭಿಯಾನಗಳು ಸೇರಿದಂತೆ ವಿವಿಧ ಅಂಶಗಳನ್ನು ಬಳಸಿಕೊಳ್ಳುವ ಮೂಲಕ ಕಾಂಗ್ರೆಸ್ ಬಿಜೆಪಿಯನ್ನು ಪದಚ್ಯುತಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಈಗ ಇದೇ ತಂತ್ರಗಳ ಅಂಶಗಳನ್ನು ತೆಗೆದುಕೊಂಡು ಮಧ್ಯಪ್ರದೇಶ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ‘50% ಕಮಿಷನ್ ಸರ್ಕಾರ’ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ.
ತಮ್ಮ ಪ್ರಚಾರವನ್ನು ಹೆಚ್ಚಿಸಲು ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶದ ನಗರಗಳಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಭಾವಚಿತ್ರಗಳನ್ನು ಹೊಂದಿರುವ ಕ್ಯೂಆರ್ ಕೋಡ್ ಇರುವ ಪೋಸ್ಟರ್ ಗಳನ್ನು ಅಂಟಿಸಿದೆ.
ಅಲ್ಲದೇ ತನ್ನ ಸಾಮಾಜಿಕ ಮಾಧ್ಯಮ ಚಾನೆಲ್ ಗಳ ಮೂಲಕ ಅಭಿಯಾನವನ್ನು ಸಕ್ರಿಯವಾಗಿಸುತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜೂನ್ 12 ರಂದು ಮಧ್ಯಪ್ರದೇಶ ಚುನಾವಣೆಗೆ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಪ್ರಿಯಾಂಕಾ ಗಾಂಧಿ ಅವರು ಕರ್ನಾಟಕದ ಗ್ಯಾರಂಟಿಗಳನ್ನು ತೆಗೆದುಕೊಂಡು ಐದು ಪ್ರಮುಖ ಚುನಾವಣಾ ಭರವಸೆಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದರು.
ತಿಂಗಳಿಗೆ 1,500 ರೂ.ಗಳ ಆರ್ಥಿಕ ಯೋಜನೆ, 500 ರೂ.ಗಳ ಸಬ್ಸಿಡಿ ದರದಲ್ಲಿ ಎಲ್ ಪಿಜಿ ಸಿಲಿಂಡರ್, ಹಳೆಯ ಪಿಂಚಣಿ ಯೋಜನೆಯನ್ನು ಪುನರುಜ್ಜೀವನಗೊಳಿಸುವುದು ಮತ್ತು 100 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ಎಂಬ ಐದು ಭರವಸೆಗಳನ್ನು ಪ್ರಕಟಿಸಿದ್ದರು.
ಲಕ್ಷಾಂತರ ಸರ್ಕಾರಿ ನೌಕರರನ್ನು ಸೆಳೆಯಲು ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw