ಚಾಮರಾಜನಗರ ಡಿಸಿ, ಎಡಿಸಿ, ವರ್ಗಾವಣೆ– ನೇಮಕವಾಗದ ಹೊಸ ಡಿಸಿ
ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಯನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್.ರಮೇಶ್ ಅವರನ್ನು ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದು ಚಾಮರಾಜನಗರ ಡಿಸಿಯಾಗಿ ಇನ್ನೂ ಯಾರನ್ನೂ ಸರ್ಕಾರ ನೇಮಕ ಮಾಡಿಲ್ಲ.
ಚಾಮರಾಜನಗರ ಹೆಚ್ಚುವರಿ ಡಿಸಿ ಹಾಗೂ ಮಲೆಮಹದೇಶ್ಚರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಕಾತ್ಯಾಯಿನಿದೇವಿ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದ್ದು ಇವರ ಜಾಗಕ್ಕೆ ಕೊಳ್ಳೇಗಾಲ ಎಸಿಯಾಗಿ ಬಡ್ತಿ ಹೊಂದಿದ್ದ ಗೀತಾ ಹುಡೇದಾ ಅವರನ್ನು ನೇಮಕ ಮಾಡಲಾಗಿದೆ. ಚಾಮರಾಜನಗರ ಎಡಿಸಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಗೀತಾ ಹುಡೇದಾ ಅಧಿಕಾರ ಸ್ವೀಕರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























