ರಾಜಭವನ ಚಲೋಗೆ  ಪೊಲೀಸರಿಂದ ತಡೆ | ಕಾಂಗ್ರೆಸ್-ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು - Mahanayaka
5:55 AM Saturday 31 - January 2026

ರಾಜಭವನ ಚಲೋಗೆ  ಪೊಲೀಸರಿಂದ ತಡೆ | ಕಾಂಗ್ರೆಸ್-ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

20/01/2021

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಇಂದು ಕಾಂಗ್ರೆಸ್ ಹಾಗೂ ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ರಾಜಭವನ ಚಲೋ ಪ್ರತಿಭಟನೆಯನ್ನು ಪೊಲೀಸರು ತಡೆ ಹಿಡಿದಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.

ಮಹಾರಾಣಿ ಕಾಲೇಜು ಬಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಮೆಜೆಸ್ಟಿಕ್ ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ರಾಜಭವನದತ್ತ ಹೊರಟಿತ್ತು. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ