ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ - Mahanayaka

ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ

arrest
29/06/2023


Provided by

ಬೆಂಗಳೂರು: ಬೆಂಗಳೂರಿನ ಅನ್ನರ್ಣೇಶ್ವರಿನಗರ ಪೊಲೀಸರ ಕಾರ್ಯಾಚರಣೆ ನಡೆಸಿ ಬುದ್ಧಿಮಾಂದ್ಯೆ ಮೇಲೆ  ಅತ್ಯಾಚಾರ ವೆಸಗಲು ಪ್ರಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಜೂನ್ 22ರಬೆಳಗ್ಗೆ 11:40 ಗಂಟೆಯ ವೇಳೆಗೆ ಅನ್ನಪೂರ್ಣೇಶ್ವರಿನಗರ ಠಾಣಾ ಸರಹದ್ದಿನ ಡಿ.ಗ್ರೂಪ್ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯು ಬುದ್ಧಿಮಾಂದ್ಯ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ವೆಸಗಲು ಪ್ರಯತ್ನಿಸಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಬಗ್ಗೆ ತನಿಖೆ ಮುಂದುವರಿಸಿ, ಹಲವಾರು ಸಿ.ಸಿ ಟಿ.ವಿಗಳನ್ನು ಪರಿಶೀಲಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದ. ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿ, ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮಿಷನರ್  ಡಾ:ಲಕ್ಷ್ಮಣ ನಿಂಬರಗಿ, ರವರ ಸೂಕ್ತ ಮಾರ್ಗದರ್ಶನದಲ್ಲಿ, ಕೆಂಗೇರಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್  ಹೆಚ್‌.ಎಸ್.ಪರಮೇಶ್ವರ್ ರವರ ನಿರ್ದೇಶನದಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಾಮಮೂರ್ತಿ.ಬಿ ರವರು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ