ರಾಹುಲ್ ಗಾಂಧಿಯ ಬೆಂಗಾವಲು ಪಡೆ ವಾಹನವನ್ನು ತಡೆದ ಮಣಿಪುರ ಪೊಲೀಸರು!
ಮಣಿಪುರ ಹಿಂಸಾಚಾರದಿಂದ ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ.
ಇಂದು ಬೆಳಗ್ಗೆ ಇಂಫಾಲ್ ಗೆ ರಾಹುಲ್ ಗಾಂಧಿ ಬಂದಿಳಿದಿದ್ದರು. ಬಳಿಕ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಮಾರ್ಗದಲ್ಲಿ ಅವರನ್ನು ತಡೆಯಲಾಗಿದೆ. ರಾಹುಲ್ ಗಾಂಧಿಯವರು ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ, ಸಂಕಷ್ಟಕ್ಕೊಳಗಾದ ಜನರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದರು. ಆದರೆ, ಇಂಫಾಲದಿಂದ 20 ಕಿಲೋಮೀಟರ್ ದೂರದಲ್ಲಿರುವ ಬಿಷ್ಣುಪುರದಲ್ಲಿ ಮಣಿಪುರ ಪೊಲೀಸರು ಅವರನ್ನು ತಡೆದಿದ್ದಾರೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ರಾಹುಲ್ ಗಾಂಧಿಗೆ ಕೈ ಬೀಸಲು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದರು, ಆದರೆ, ನಮ್ಮನ್ನೇಕೆ ತಡೆದಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಸಂಕಷ್ಟಕ್ಕೊಳಗಾದವರ ಭೇಟಿಗೆ ಪೊಲೀಸರು ನಮಗೇಕೆ ಅವಕಾಶ ನೀಡುತ್ತಿಲ್ಲ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಸಂತ್ರಸ್ತರನ್ನು ಭೇಟಿ ಮಾಡಲಷ್ಟೇ ರಾಹುಲ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ನಾವು ಸುಮಾರು 20-25 ಕಿಮೀ ಸಂಚರಿಸಿದ್ದೆವು. ಆದರೆ, ಎಲ್ಲಿಯೂ ರಸ್ತೆ ತಡೆ ಇರಲಿಲ್ಲ. ರಾಹುಲ್ ಗಾಂಧಿ ಕಾರಿನೊಳಗೆ ಕುಳಿತಿದ್ದಾರೆ. ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದು ಯಾರು ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























