2002ರ ಗೋಧ್ರೋತ್ತರ ದಂಗೆ: ತೀಸ್ತಾ ಸೆಟಲ್ವಾಡ್‌ ಗೆ ಸಂಕಷ್ಟ..? - Mahanayaka
12:17 AM Thursday 21 - August 2025

2002ರ ಗೋಧ್ರೋತ್ತರ ದಂಗೆ: ತೀಸ್ತಾ ಸೆಟಲ್ವಾಡ್‌ ಗೆ ಸಂಕಷ್ಟ..?

01/07/2023


Provided by

2002ರ ಗೋಧ್ರೋತ್ತರ ದಂಗೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. ಅಮಾಯಕರನ್ನು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್‌ರನ್ನು ಗುಜರಾತ್ ಪೊಲೀಸರು 2022ರ ಜೂನ್‌ನಲ್ಲಿ ಬಂಧಿಸಿದ್ದರು.

ತೀಸ್ತಾ ಕೂಡಲೇ ಶರಣಾಗುವಂತೆಯೂ ನ್ಯಾಯಮೂರ್ತಿ ನಿರ್ಜರ್ ದೇಸಾಯಿ ಸೂಚಿಸಿದ್ದಾರೆ. ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಪಿಗೆ ತಡೆ ಆಜ್ಞೆ ಕೋರಿದ ತೀಸ್ತಾ ಸೆಟಲ್ವಾಡ್ ಪರ ವಕೀಲರಾದ ಮಿಹಿರ್ ಥಾಕೋರೆಯವರ ಮನವಿಯನ್ನು ನ್ಯಾಯಾಧೀಶರು ತಳ್ಳಿಹಾಕಿದರು.

ದಂಗೆಗೆ ಸಂಬಂಧಿಸಿದಂತೆ ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 2022 ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.
ಗೋಧ್ರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್‌ರನ್ನು ಗುಜರಾತ್ ಪೊಲೀಸರು 2022ರ ಜೂನ್‌ನಲ್ಲಿ ಬಂಧಿಸಿದ್ದರು. ಅವರನ್ನು ಒಂದು ವಾರ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು. ಅನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ