ಏಕರೂಪ ನಾಗರಿಕ ಸಂಹಿತೆ: ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ..! - Mahanayaka

ಏಕರೂಪ ನಾಗರಿಕ ಸಂಹಿತೆ: ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ..!

02/07/2023


Provided by

ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಬೆಂಬಲಿಸುವಂತಹ ಹೇಳಿಕೆ ನೀಡಿದ್ದಾರೆ. ಇದು ಭಾರತೀಯರನ್ನು ‘ಒಗ್ಗೂಡಿಸುತ್ತದೆ’ ಎಂಬ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಯುಸಿಸಿ ಅನುಷ್ಠಾನವು ಭಾರತವನ್ನು ‘ಬಲಪಡಿಸುತ್ತದೆ’ ಮತ್ತು ಜನರಲ್ಲಿ ಸಹೋದರತ್ವದ ಪ್ರಜ್ಞೆಯನ್ನು ಬೆಳೆಸುತ್ತದೆ ಎಂದರು. ಆದರೆ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ದೇಶದಲ್ಲಿ ಸುಧಾರಣೆಯನ್ನು ಜಾರಿಗೆ ತರಲು ‘ಬಲವಂತವಾಗಿ’ ಪ್ರಯತ್ನಿಸುತ್ತಿದೆ ಎಂದು ಅವರು ಇದೇ ವೇಳೆ ಟೀಕಿಸಿದರು.

ನಮ್ಮ ಪಕ್ಷವು ಯುಸಿಸಿ ಅನುಷ್ಠಾನಕ್ಕೆ ವಿರುದ್ಧವಾಗಿಲ್ಲ. ಆದರೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಪ್ರಯತ್ನಿಸುತ್ತಿರುವ ವಿಧಾನವನ್ನು ನಾವು ಬೆಂಬಲಿಸುವುದಿಲ್ಲ. ಈ ವಿಷಯವನ್ನು ರಾಜಕೀಯಗೊಳಿಸುವುದು ಮತ್ತು ದೇಶದಲ್ಲಿ ಯುಸಿಸಿಯನ್ನು ಬಲವಂತವಾಗಿ ಜಾರಿಗೆ ತರುವುದು ಸರಿಯಲ್ಲ ಎಂದು ಮಾಯಾವತಿ ಹೇಳಿಕೆ ನೀಡಿದ್ದಾರೆ.

ಈ ವಿಷಯವನ್ನು ರಾಜಕೀಯಗೊಳಿಸುವುದರಿಂದ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರಸ್ತುತ ಹಣದುಬ್ಬರ, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.

ಏಕರೂಪ ನಾಗರಿಕ ಸಂಹಿತೆಯು ಭಾರತದ ಎಲ್ಲಾ ನಾಗರಿಕರಿಗೆ ಅನ್ವಯವಾಗುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ. ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಇತರ ವೈಯಕ್ತಿಕ ವಿಷಯಗಳೊಂದಿಗೆ ವ್ಯವಹರಿಸುವಾಗ ಧರ್ಮವನ್ನು ಆಧಾರಿಸುವುದಿಲ್ಲ ಎಂದಿದ್ದಾರೆ.

ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ದ್ವಂದ್ವ ಕಾನೂನುಗಳೊಂದಿಗೆ ದೇಶವು ಹೇಗೆ ಕಾರ್ಯನಿರ್ವಹಿಸಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಕೇಳಿದ ನಂತರ ಹಾಗೂ ಮುಸ್ಲಿಂ ಸಮುದಾಯವನ್ನು ‘ದಾರಿತಪ್ಪಿಸಲು ಮತ್ತು ಪ್ರಚೋದಿಸಲು’ ಪ್ರತಿಪಕ್ಷಗಳು ಯುಸಿಸಿ ವಿಷಯವನ್ನು ಬಳಸುತ್ತಿವೆ ಎಂದು ಆರೋಪಿಸಿದ ನಂತರ ಯುಸಿಸಿ ಕುರಿತ ಚರ್ಚೆಯು ಮತ್ತೆ ವೇಗ ಪಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ