ಸಿದ್ದೇಶ್ ಯಾದವ್ ಅವರ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ - Mahanayaka

ಸಿದ್ದೇಶ್ ಯಾದವ್ ಅವರ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ

yadav
03/07/2023


Provided by

ಬೆಂಗಳೂರು: ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರ ಅಕಾಲಿಕ ನಿಧನ ಆಘಾತಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾಗಿ ಅವರು ಬಿಜೆಪಿಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇರಿದಂತೆ ಪರಿವಾರದ ಸಂಘಟನೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಅವರ ನಿಧನ ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ